ಅರಿಯಡ್ಕ ಗ್ರಾಮ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ವಿಶೇಷ ಗ್ರಾಮ ಸಭೆ

0

ಪುತ್ತೂರು: ಅರಿಯಡ್ಕ ಗ್ರಾಮ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಹಾಗೂ 15ನೇ ಹಣಕಾಸು ಯೋಜನೆಯ 2023-24ನೇ ಸಾಲಿನ ಗ್ರಾಮ ಪಂಚಾಯತ್ ಪ್ರಥಮ ಹಾಗೂ ದ್ವಿತೀಯ ಹಂತದ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆ , ಅರಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ಮಣಿಯಾಣಿ ಕುತ್ಯಾಡಿಯವರ ಅಧ್ಯಕ್ಷತೆಯಲ್ಲಿ ನ.28ರಂದು ಅರಿಯಡ್ಕ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸಾಮಾಜಿಕ ಅರಣ್ಯ ಇಲಾಖೆ ಪುತ್ತೂರು ಇದರ ವಲಯ ಅರಣ್ಯಾಧಿಕಾರಿ ವಿದ್ಯಾ ರಾಣಿ ಪಿ.ಕೆ ನೋಡೆಲ್ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.


ಪ್ರಾಸ್ತಾವಿಕವಾಗಿ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಪ್ರವೀಣ್ ಮಾತನಾಡಿ ಅರಿಯಡ್ಕ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಒಟ್ಟು 204 ಜನರು ಸಕ್ರೀಯವಾಗಿ ಪಾಲ್ಗೊಂಡು ವಿವಿಧ ಕಾರ್ಯಕ್ರಮಗಳನ್ನು ಮಾಡಿದ್ದು ಒಟ್ಟು ಕೂಲಿ ರೂ.35,76,260-00 ಆಗಿರುತ್ತದೆ. ಸಾಮಾಗ್ರಿ ರೂ.13,67,322-00 ಆಗಿರುತ್ತದೆ. ಒಟ್ಟು ರೂ 49,43,582-00 ವಿವಿಧ ಕಾಮಗಾರಿಗಳಿಗೆ ಖರ್ಚಾಗಿದೆ. ಅರಿಯಡ್ಕ ಗ್ರಾಮ ಪಂಚಾಯತ್ 2022-23ನೇ ಸಾಲಿನಲ್ಲಿ 15 ನೇ ಹಣಕಾಸು ಯೋಜನೆ ಅನುಷ್ಠಾನಗೊಂಡ ಕಾಮಗಾರಿಗಳಿಗೆ ಒಟ್ಟು ರೂ. 42,059,976-00 ಖರ್ಚಾಗಿದೆ.2022-23ನೇ ಸಾಲಿನ 15ನೇ ಹಣಕಾಸು ಯೋಜನೆಯಡಿ ಕುಡಿಯುವ ನೀರು, ಬೀದಿ ದೀಪ, ಸ್ವಚ್ಛತೆ ನಿರ್ವಹಣೆಗೆ ರೂ.13,39,439-00 ಭರಿಸಲಾಗಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷೆ ಮೀನಾಕ್ಷಿ ಪಾಪೆಮಜಲು, ಪಂಚಾಯತ್ ಸದಸ್ಯರಾದ ಹರೀಶ್ ರೈ ಜಾರುತ್ತಾರು, ಲೋಕೇಶ್ ಚಾಕೋಟೆ, ರಾಜೇಶ್ ಮಣಿಯಾಣಿ ತ್ಯಾಗರಾಜೆ, ನಾರಾಯಣ ನಾಯ್ಕ ಚಾಕೋಟೆ, ಸೌಮ್ಯಾ ಬಾಲಸುಬ್ರಹ್ಮಣ್ಯ ಮುಂಡ ಕೊಚ್ಚಿ, ಭಾರತಿ ವಸಂತ್ ಕೌಡಿಚ್ಚಾರು, ಜಯಂತಿ ಪಟ್ಟು ಮೂಲೆ, ಅನಿತಾ ಆಚಾರಿ ಮೂಲೆ, ಸದಾನಂದ ಮಣಿಯಾಣಿ ಕೊಪ್ಪಳ, ರೇಣುಕಾ ಸತೀಶ್ ಕರ್ಕೇರಾ ಮಡ್ಯಂಗಳ, ಪುಷ್ಪಲತಾ ಮರತ್ತಮೂಲೆ, ‌ಮತ್ತು ಉಷಾ ರೇಖಾ ರೈ ಅಮೈ ಮಾಜಿ ಗ್ರಾಮ ಪಂಚಾಯತ್ ಸದಸ್ಯರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಗ್ರಾಮ ಸಂಪನ್ಮೂಲ ವ್ಯಕ್ತಿಗಳು, ಪಂಚಾಯತ್ ಸಿಬ್ಬಂದಿಗಳು, ಉದ್ಯೋಗ ಖಾತರಿ ಫಲಾನುಭವಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿರುವ ಫಲಾನುಭವಿಗಳ ಪಟ್ಟಿಯನ್ನು ಗ್ರಾಮ ಸಂಪನ್ಮೂಲ ವ್ಯಕ್ತಿ ರಶ್ಮಿ ವಾಚಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುನೀಲ್ ಎಚ್.ಟಿ ಸ್ವಾಗತಿಸಿ ,ವಂದಿಸಿದರು .

LEAVE A REPLY

Please enter your comment!
Please enter your name here