ಡಿ.1: ಪಿಎಂ ವಿಶ್ವಕರ್ಮ ಯೋಜನೆಯ ಉಚಿತ ನೋಂದಣಿ ಕಾರ್ಯಕ್ರಮ

0

ಪುತ್ತೂರು: ವಿಶ್ವಕರ್ಮ ಯುವ ಮಿಲನ್ ಪುತ್ತೂರು ತಾಲೂಕು ವಲಯ, ದ.ಕ ಜಿಲ್ಲಾ ಕೈಗಾರಿಕಾ ಕೇಂದ್ರ ಮಂಗಳೂರು ಹಾಗೂ ನಗರಸಭೆ ಪುತ್ತೂರು ಇವರ ಆಶ್ರಯದಲ್ಲಿ ಪಿಎಂ ವಿಶ್ವಕರ್ಮ ಯೋಜನೆಯ ಆನ್‌ಲೈನ್ ಉಚಿತ ನೋಂದಣಿ ಕಾರ್ಯಕ್ರಮವು ಡಿ.1ರಂದು ಪುತ್ತೂರು ನಗರ ಸಭೆಯ ಸಭಾಂಗಣದಲ್ಲಿ ನಡೆಯಲಿದೆ. ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಇದರ ಪ್ರಯೋಜನವನ್ನು ಪಡೆಯಬೇಕಾಗಿ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ 9535663628, 9686853932 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here