ಅಧ್ಯಕ್ಷರಾಗಿ ಸುಧೀಶ್ ಪಟ್ಟೆ ಪುನರಾಯ್ಕೆ, ಉಪಾಧ್ಯಕ್ಷರಾಗಿ ವೇದಾವತಿ ಕೆ.ಆಯ್ಕೆ

ರಾಮಕುಂಜ: ಕಡಬ ತಾಲೂಕಿನ ಕೊಯಿಲ ಗ್ರಾಮದ ಸಂಕೇಶ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ಮುಂದಿನ ೫ ವರ್ಷಗಳ ಅವಧಿಗೆ ನಿರ್ದೇಶಕರ ಅವಿರೋಧ ಆಯ್ಕೆ ನಡೆದಿದೆ. ಅಧ್ಯಕ್ಷರಾಗಿ ಸತತ 2ನೇ ಭಾರಿಗೆ ಸುಧೀಶ್ ಪಟ್ಟೆ ಹಾಗೂ ಉಪಾಧ್ಯಕ್ಷರಾಗಿ ವೇದಾವತಿ ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಾಮಾನ್ಯ ಸ್ಥಾನಕ್ಕೆ ಮೀಸಲಾದ 7 ನಿರ್ದೇಶಕ ಸ್ಥಾನಕ್ಕೆ ಸುಧೀಶ್ ಪಟ್ಟೆ, ಪ್ರವೀಣ್ ಕುಮಾರ್ ನಿಡೇಲು, ಹರಿಶ್ಚಂದ್ರ ಕಲ್ಕಾಡಿ, ರಘುನಾಥ ಶೆಟ್ಟಿ ಕಲ್ಕಾಡಿ, ಕುಶಾಲಪ್ಪ ಗೌಡ ಕೊಲ್ಯ, ನಿಶಾ ಸೆಬಾಸ್ಟಿನ್, ಅಮಿತಾ ಪರಂಗಾಜೆ, ಹಿಂದುಳಿದ ವರ್ಗ ಪ್ರವರ್ಗ ಎ ಮೀಸಲು ಸ್ಥಾನದಿಂದ ಮಹಮ್ಮದ್ ಇಕ್ಬಾಲ್ ಕುದುಲೂರು, ಮಹಿಳಾ ಮೀಸಲು ಸ್ಥಾನದಿಂದ ವೇದಾವತಿ ಕೆ., ಚೇತನಾ ಯನ್ ಪಲ್ಲಡ್ಕ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಉಳಿದಂತೆ ಹಿಂದುಳಿದ ವರ್ಗ ಪ್ರವರ್ಗ ಎ ಮೀಸಲು ಸ್ಥಾನ, ಅನುಸೂಚಿತ ಜಾತಿ ಮೀಸಲು ಸ್ಥಾನ ಹಾಗೂ ಅನುಸೂಚಿತ ಪಂಗಡ ಮೀಸಲು ಸ್ಥಾನದಿಂದ ಯಾವುದೇ ನಾಮಪತ್ರ ಸಲ್ಲಿಕೆಯಾಗದೇ ಇದ್ದ ಹಿನ್ನೆಲೆಯಲ್ಲಿ ಖಾಲಿಯಾಗಿದೆ.
ಅಧ್ಯಕ್ಷ/ಉಪಾಧ್ಯಕ್ಷರ ಆಯ್ಕೆ:
ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ನ.25ರಂದು ನಡೆದ ನೂತನ ಆಡಳಿತ ಮಂಡಳಿ ಸಭೆಯಲ್ಲಿ ನಡೆಯಿತು. ಅಧ್ಯಕ್ಷರಾಗಿ ಸುಧೀಶ್ ಪಟ್ಟೆ ಸತತ 2ನೇ ಬಾರಿಗೆ ಅವಿರೋಧವಾಗಿ ಪುನರಾಯ್ಕೆಯಾದರು. ಉಪಾಧ್ಯಕ್ಷರಾಗಿ ವೇದಾವತಿ ಕೆ.ಅವಿರೋಧವಾಗಿ ಆಯ್ಕೆಯಾದರು. ಸಹಕಾರ ಸಂಘಗಳ ಉಪನಿಬಂಧಕರಾದ ನಾಗೇಂದ್ರ ಬಿ.ಚುನಾವಣಾಧಿಕಾರಿಯಾಗಿದ್ದರು. ಸಂಘದ ಕಾರ್ಯದರ್ಶಿ ತಿಮ್ಮಪ್ಪ ಗೌಡ ಎಸ್.,ಸಹಕರಿಸಿದರು.