ಪುತ್ತೂರು: ಅತಿಥಿ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಅವರಿಗೆ ಸುಳ್ಯ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಅತಿಥಿ ಶಿಕ್ಷಕರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ ಶಾಸಕಿ ಭಾಗೀರಥಿ ಮುರುಳ್ಯ ಅವರು, ಸದನದಲ್ಲಿ ಅತಿಥಿ ಶಿಕ್ಷಕರ ಬಗ್ಗೆ ಚರ್ಚಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಅತಿಥಿ ಶಿಕ್ಷಕರುಗಳಾದ ದಯಾಮಣಿ ಕೆ ಕಾವ್ಯ, ಚಿದಾನಂದ, ಸ್ಮಿತಾ ಹಾಗೂ ಭುವನ್ ಅವರು ಉಪಸ್ಥಿತರಿದ್ದರು.