ಪುತ್ತೂರಿನಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ವತಿಯಿಂದ ಜಿಲ್ಲಾ ಮಟ್ಟದ ಕ್ರೀಡಾಕೂಟ

0

ಆಕರ್ಷಕ ಕ್ರೀಡಾಜ್ಯೋತಿ ಬೆಳಗಿಸುವಿಕೆ,ಆಕರ್ಷಕ ಪಥ ಸಂಚಲನ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಸಹಭಾಗಿತ್ವದಲ್ಲಿ ದ.ಕ. ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳು ಹಾಗೂ ನವೋದಯ ಸ್ವಸಹಾಯ ಸಂಘಗಳ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ ನ.30 ರಂದು ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು.


ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಕ್ರೀಡಾಕೂಟ ಉದ್ಘಾಟಿಸಿ, ಕ್ರೀಡಾ ಜ್ಯೋತಿ ಪ್ರಜ್ವಲನೆ ಮಾಡಿದರು. ಸಂಸದ ನಳಿನ್ ಕುಮಾರ್ ಕಟೀಲ್ ಅವರು ಧ್ವಜಾರೋಹಣ ಮಾಡಿದರು.
ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮೆನೆಜಿಂಗ್ ಟ್ರಸ್ಟಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿ ಕ್ರೀಡಾಕೂಟದ ಆರಂಭದಲ್ಲಿ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕ ಸಂಜೀವ ಮಠಂದೂರು. ಮಾಜಿ ಶಾಸಕ ಸಂಜೀವ ಮಠಂದೂರು, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷ ವಿನಯಕುಮಾ ಸೂರಿಂಜೆ, ನಿರ್ದೇಶಕರಾದ ಶಶಿಕುಮಾರ್ ರೈ ಬಿ, ಎಸ್.ಬಿ.ಜಯರಾಮ ರೈ ಸಹಿತ ಹಲವಾರು ಮಂದಿ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here