




ಟ್ರಸ್ಟ್ ಮೂಲಕ ಬಡಜನರ ಸೇವೆ ನಿರಂತರ: ಅಶೋಕ್ ರೈ



ಪುತ್ತೂರು: ಬಡ ಜನರ ಸೇವೆಗೆಂದು ಕಳೆದ 11 ವರ್ಷಗಳಿಂದ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ರಚನೆ ಮಾಡಲಾಗಿದ್ದು ಮುಂದೆಯೂ ಟ್ರಸ್ಟ್ ನ ಸಮಾಜ ಸೇವೆ ಮುಂದುವರೆಯುತ್ತದೆ ಎಂದು ಟ್ರಸ್ಟ್ ಅಧ್ಯಕ್ಷ ಶಾಸಕ ಅಶೋಕ್ ರೈ ಹೇಳಿದರು.





ಅವರು ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಾರ್ಮಿಕರ ಕಾರ್ಡ್ ವಿತರಿಸಿ ಮಾತನಾಡಿದರು. ಒಟ್ಟು 5400 ಕಾರ್ಮಿಕ ಕಾರ್ಡುಗಳನ್ನು ವಿತರಿಸಲಾಗಿದೆ.ಕಾರ್ಮಿಕರ ಕಾರ್ಡು ನೀಡುವ ಮೂಲಕ ಬಡವರ ಬದುಕಿನಲ್ಲಿ ಭರವಸೆ ಮೂಡಿಸುವ ಕೆಲಸ ಟ್ರಸ್ಟಿನಿಂದ ನಡೆಯುತ್ತಿದೆ. ಮುಂದಿನದಿನಗಳಲ್ಲಿಇನ್ನಷ್ಟು ಸಮಾಜ ಸೇವೆಗಳು ಟ್ರಸ್ಟ್ ವತಿಯಿಂದ ನಡೆಯಲಿದ್ದು ಜನರ ಸಹಕಾರವನ್ನು ಬಯಸುವುದಾಗಿ ಹೇಳಿದರು.

ವೇದಿಕೆಯಲ್ಲಿ ಟ್ರಸ್ಟ್ ಪ್ರಮುಖರಾದ ಕಾವು ಹೇಮನಾಥ ಶೆಟ್ಟಿ, ನಿಹಾಲ್ ಶೆಟ್ಟಿ ಕಲ್ಲಾರೆ, ಉಪಸ್ಥಿತರಿದ್ದರು. ರಚನಾ ರೈ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.







