ಅಶ್ವರಥದಲ್ಲಿ ತಾಲೂಕಿನಾದ್ಯಂತ ತೆರಳುವ ಕ್ರೀಡಾಜ್ಯೋತಿ, ಹಸಿರುವಾಣಿ ವಾಹನ
ಪುತ್ತೂರು: ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ನೇತೃತ್ವದಲ್ಲಿ ಕೊಂಬೆಟ್ಟಿನಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿ ಡಿ.2, 3 ಮತ್ತು 4 ರಂದು ನಡೆಯುವ ರಾಜ್ಯಮಟ್ಟದ 17ರ ವಯೋಮಾನದ ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟದ ಪೂರ್ವಭಾವಿಯಾಗಿ ತಾಲೂಕಿನಾದ್ಯಂತ ತೆರಳುವ ಕ್ರೀಡಾಜ್ಯೋತಿಗೆಗೆ ಡಿ.1ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು ಭಾಗದಿಂದ ಚಾಲನೆ ನೀಡಲಾಯಿತು.
ಬೆಳ್ಳಿಯ ಮಾದರಿಯಲ್ಲಿರುವ ಅಶ್ವರಥದಲ್ಲಿನ ಕ್ರೀಡಾ ಜ್ಯೋತಿಗೆ ದೇವಳದಿಂದ ಜ್ಯೋತಿ ಪ್ರಜ್ವಲಿಸಲಾಯಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಅವರು ಕ್ರೀಡಾ ಜ್ಯೋತಿಗೆ ಚಾಲನೆ ನೀಡಿದರು. ಮಟ್ಟದ ಕ್ರೀಡಾಕೂಟದ ಕ್ರೀಡಾ ಕಾರಂಜಿಯ ಕಾರ್ಯಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಸಹಾಯಕ ಕಮೀಷನರ್ ಗಿರೀಶ್ ನಂದನ್, ಡಿವೈಎಸ್ಪಿ ಅರುಣ್ ನಾಗೇಗೌಡ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ಬಯ್ಯ ನಾಯ್ಕ, ತಹಸೀಲ್ದಾರ್ ಶಿವಶಂಕರ್ ಜಿ, ತಾ.ಪಂ ಕಾರ್ಯನಿರ್ವಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ ಹೆಚ್, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್, ಮಾಜಿ ಶಾಸಕಿ ಮಲ್ಲಿಕಾಪ್ರಸಾದ್, ರಾಜ್ಯ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಎನ್.ಕೆ. ಜಗನ್ನಿವಾಸ ರಾವ್, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವೀಂದ್ರ ಶೆಟ್ಟಿ ನುಳಿಯಾಲು, ಡ್ಯಾಶ್ ಮಾರ್ಕೆಟಿಂಗ್ ಮಾಲಕಿ ನಳಿನಿ ಪಿ ರೈ, ಉದ್ಯಮಿ ಪ್ರಸನ್ನ ಕುಮಾರ್ ಶೆಟ್ಟಿ ಸಾಮೆತ್ತಡ್ಕ, ಹಿರಿಯ ಉದ್ಯಮಿ ಚಿಕ್ಕಪ್ಪ ನಾಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಶೇಖರ್ ನಾರಾವಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸುಂದರ ಗೌಡ, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ದಯಾನಂದ ರೈ ಮನವಳಿಕೆ, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಭುವನೇಶ್ ಜೆ, ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಮುಖ್ಯಗುರು ಜಯಲಕ್ಷ್ಮೀ, ದೈಹಿಕ ಶಿಕ್ಷಣ ಶಿಕ್ಷಕಿ ಸುನಿತಾ, ಜಿ.ಪಂ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ತಾ.ಪಂ ಮಾಜಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು, ಅಶ್ವರಥದ ಉಸ್ತುವಾರಿಯಾದ ಸೀತಾರಾಮ, ಸುಧೀರ್, ಸುಧಾಕರ್, ಬಾಲಕೃಷ್ಣ, ನೇಮಾಕ್ಷ ಸುವರ್ಣ, ದೈಹಿಕ ಶಿಕ್ಷಣ ಶಿಕ್ಷಕ ಮಾದವ ಪೆರಿಯತ್ತೋಡಿ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ದಯಾನಂದ ರೈ ಕೋರ್ಮಂಡ, ಮಾಜಿ ಪುರಸಭೆ ಅಧ್ಯಕ್ಷ ಯು ಲೋಕೇಶ್ ಹೆಗ್ಡೆ, ಗಣೇಶ್ ಶೆಟ್ಟಿ ನೆಲ್ಲಿಕಟ್ಟೆ, ಕೊಂಬೆಟ್ಟು ಸರಕಾರಿ ಪೌಢಶಾಲೆಯ ಮೇಲುಸ್ತುವಾರಿ ಸಮಿತಿ ಕಾರ್ಯಾಧ್ಯಕ್ಷ ಜೋಕಿಂ ಡಿಸೋಜ, ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.