ಪುತ್ತೂರು:ವೀರಮಂಗಲದ ಆನಾಜೆ ಶ್ರೀ ಮಹಾವಿಷ್ಣು ಸೇವಾ ಪ್ರತಿಷ್ಠಾನದ ವತಿಯಿಂದ ಆನಾಜೆ ವೀರಮಂಗಲ ಸಾರ್ವಜನಿಕ ಶ್ರೀ ಮಹಾಲಿಂಗೇಶ್ವರ ಕಟ್ಟೆ ಸಮಿತಿಯ ಸಹಕಾರದೊಂದಿಗೆ 23ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮಗಳು ಡಿ.2ರಂದು ಸಂಜೆ ಆನಾಜೆ ವೀರಮಂಗಲ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಯಲ್ಲಿ ನಡೆಯಲಿದೆ.
ಸಂಜೆ 6 ಗಂಟೆಯಿಂದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆಯು ಪ್ರಾರಂಭಗೊಳ್ಳಲಿದೆ. ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅರ್ಚಕ ರಾಧಾಕೃಷ್ಣ ಶಗ್ರಿತ್ತಾಯರವರ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು ಸತ್ಯನಾರಾಯಣ ಕಾರಂತ ಆಲಂಕಾರು ಕಥಾ ಪ್ರವಚನ ನಡೆಸಿಕೊಡಲಿದ್ದಾರೆ.
ಬಳಿಕ ನಡೆಯುವ ಸಭಾ ಕಾರ್ಯಕ್ರಮವನ್ನು ಕೆಮ್ಮಿಂಜೆ ಉದಯ ತಂತ್ರಿಗಳು ಉದ್ಘಾಟಿಸಲಿದ್ದಾರೆ. ಪುತ್ತೂರಿನ ಖ್ಯಾತ ವೈದ್ಯ ಡಾ.ಸುರೇಶ್ ಪುತ್ತೂರಾಯ ಅಧ್ಯಕ್ಷತೆ ವಹಿಸಲಿದ್ದಾರೆ. ಉಪನ್ಯಾಸಕ ಆದರ್ಶ ಗೋಖಲೆ ಕಾರ್ಕಳ ಧಾರ್ಮಿಕ ಭಾಷಣ ಮಾಡಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ, ಸುಳ್ಯ ಶಾಸಕಿ ಭಾಗಿರಥಿ ಮುರುಳ್ಯ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಸಭಾ ಕಾರ್ಯಕ್ರಮದ ಬಳಿಕ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಬಳಿಕ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶ್ರೀಕೃಷ್ಣ ಕಲಾಕೇಂದ್ರ ವೀರಮಂಗಲ ಮತ್ತು ಭಕ್ತಕೋಡಿ ಇದರ ವಿದ್ಯಾರ್ಥಿಗಳಿಂದ ನೃತ್ಯ ವೈವಿದ್ಯ ಹಾಗೂ ಶಾರದಾ ಆರ್ಟ್ಸ್ ಮಂಜೇಶ್ವರ ಇವರಿಂದ ‘ಕಥೆ ಎಡ್ಡೆಂಡು’ ತುಳು ಹಾಸ್ಯಮಯ ನಾಟಕ ನಡೆಯಲಿದೆ ಎಂದು ಶ್ರೀ ಮಹಾವಿಷ್ಣು ಸೇವಾ ಪ್ರತಿಷ್ಠಾನದ ಅಧ್ಯಕ್ಷ ಗೋಪಾಲಕೃಷ್ಣ ವೀರಮಂಗಲ ಹಾಗೂ ಸಾರ್ವಜನಿಕ ಶ್ರೀ ಮಹಾಲಿಂಗೇಶ್ವರ ಕಟ್ಟೆಪೂಜೆ ಸಮಿತಿ ಅಧ್ಯಕ್ಷ ಬೆಳಿಯಪ್ಪ ಗೌಡ ಪೆಲತ್ತಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.