ರಾಜ್ಯದ ಮುಖ್ಯಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ಅಧಿಕಾರ ಸ್ವೀಕಾರ

0

ಬೆಂಗಳೂರು:ರಾಜ್ಯ ಸರಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯಲ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಗೋಯಲ್ ಅವರಿಗೆ ಶುಭಹಾರೈಸಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಕರ್ನಾಟಕ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಗಳಾಗಿ ನೇಮಕಗೊಂಡ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯಲ್ ಅವರಿಗೆ ಅಭಿನಂದನೆಗಳು ಎಂದು ಶುಭ ಹಾರೈಸಿದ್ದಾರೆ.


ರಾಜ್ಯದ ಮುಖ್ಯಕಾರ್ಯದರ್ಶಿಯಾಗಿದ್ದ ವಂದಿತಾ ಶರ್ಮಾ ಅವರ ಅಧಿಕಾರದ ಅವಧಿ ನವೆಂಬರ್ 30ಕ್ಕೆ ಕೊನೆಗೊಂಡಿತು.ರಜನೀಶ್ ಗೋಯಲ್ ಅವರು ಸೇವಾ ಜ್ಯೇಷ್ಠತೆ ಆಧಾರದಲ್ಲಿ ಈ ಹುದ್ದೆಗೆ ನಿಯೋಜಿತರಾಗಿದ್ದಾರೆ.1986ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಇವರ ಅಧಿಕಾರದ ಅವಧಿ ಕೇವಲ ಏಳು ತಿಂಗಳು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಗೋಯಲ್ ಅವರು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

ರಜನೀಶ್ ಗೋಯಲ್ ಅವರು ಪ್ರೊಬೇಷನರಿ ಅವಧಿ ಬಳಿಕ ಆರಂಭದಲ್ಲಿ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾಗಿ ಕಾರ್ಯನಿರ್ವಹಿಸಿ ಜನಮನ್ನಣೆ ಪಡೆದಿದ್ದರು.ಪುತ್ತೂರಿನಲ್ಲಿ ಉಪವಿಭಾಗಾಧಿಕಾರಿಯಾಗಿದ್ದ ಅವಧಿಯಲ್ಲಿ, ಜನಸಾಮಾನ್ಯರು ತಮ್ಮ ಕೆಲಸಗಳಿಗಾಗಿ ಸರಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಟೋಕನ್ ಪದ್ಧತಿಯನ್ನು ಜಾರಿಗೊಳಿಸಿದ್ದರು.ಪುತ್ತೂರು ಮಹಾಲಿಂಗೇಶ್ವರ ದೇವಳದ ಆಡಳಿತಾಧಿಕಾರಿಯಾಗಿಯೂ ಗೋಯಲ್ ಅವರು ಸೇವೆ ಸಲ್ಲಿಸಿದ್ದರು.

LEAVE A REPLY

Please enter your comment!
Please enter your name here