![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಕಡಬ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.
ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕು ಬೂದಿಹಾಳ ಗ್ರಾಮದ ನಿಂಗಪ್ಪ ಎಂಬಾತನನ್ನು ಕಡಬ ಠಾಣಾ ಪೊಲೀಸರು ಮೈಸೂರು ಬಿರುಹುಂಡಿ ಎಂಬಲ್ಲಿ ಪತ್ತೆ ಮಾಡಿ ಬಂಧಿಸಿ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.