ಈಶ್ವರಮಂಗಲ ಗಜಾನನ ವಿದ್ಯಾಲಯದಲ್ಲಿ ರಾಜ್ಯ ಕ್ರೀಡಾಜ್ಯೋತಿಗೆ ಸ್ವಾಗತ

0

ಪುತ್ತೂರು: ಪುತ್ತೂರಿನಲ್ಲಿ ಪ್ರಥಮ ಬಾರಿಗೆ ನಡೆಯುತ್ತಿರುವ ರಾಜ್ಯಮಟ್ಟದ 17ರ ವಯೋಮಾನದ ವಿದ್ಯಾರ್ಥಿಗಳ ಕ್ರೀಡಾಕೂಟವು ಅತ್ಯಂತ ಯಶಸ್ವಿಯಾಗಿ ನಡೆಯುವ ಮೂಲಕ ರಾಜ್ಯಕ್ಕೆ ಮಾದರಿಯಾಗಲಿ ಎಂದು ಗಜಾನನ ವಿದ್ಯಾಸಂಸ್ಥೆಗಳ ಸಂಚಾಲಕ ಶಿವರಾಮ್.ಪಿ ಹೇಳಿದರು.

ಅವರು ಈಶ್ವರಮಂಗಲ ಗಜಾನನ ಆಂಗ್ಲಮಾಧ್ಯಮ ಶಾಲಾ ಆವರಣದಲ್ಲಿ ಪುತ್ತೂರಿನಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟದ ಕ್ರೀಡಾ ಜ್ಯೋತಿಯನ್ನು ಸ್ವಾಗತಿಸಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಶಾಲಾ ಮಕ್ಕಳು ಕ್ರೀಡಾ ಜ್ಯೋತಿ ಹೊತ್ತ ರಥವನ್ನು ಮೆರವಣಿಗೆಯಲ್ಲಿ ಶಾಲಾ ಆವರಣಕ್ಕೆ ಕರೆ ತಂದರು. ಶಾಲಾ ಶಿಕ್ಷಕರು ಹಾಗೂ ಶಿಕ್ಷಕೇತರರು ಮತ್ತು ಸ್ಥಳೀಯ ಪದಾಧಿಕಾರಿಗಳು, ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here