ರಾಮಕುಂಜ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ ಕೊಯಿಲ ಕೆ.ಸಿ.ಫಾರ್ಮ್ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನ.30ರಂದು ಸಾಯಂಕಾಲ ನಡೆಯಿತು.
ಕೊಯಿಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಾ ಸುಭಾಷ್ ಶೆಟ್ಟಿ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಪಠ್ಯದೊಂದಿಗೆ ಜೀವನ ಪಾಠದ ಅನುಭವಕ್ಕೆ ಎನ್ನೆಸೆಸ್ಸ್ ಪೂರಕವಾಗಿದೆ. ಶಿಬಿರದಲ್ಲಿ ಪಡೆದ ಎಲ್ಲಾ ಧನಾತ್ಮಕ ಅಂಶಗಳನ್ನು ಭವಿಷ್ಯದ ಜೀವನದಲ್ಲಿ ಅಳವಡಿಸಿಕೊಂಡಾಗ ಶಿಬಿರದಲ್ಲಿ ಭಾಗವಹಿಸಿರುವುದು ಸಾರ್ಥಕ್ಯಗೊಳ್ಳುತ್ತದೆ ಎಂದರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಪ್ರಾಂಶುಪಾಲ ದಿನೇಶ ಪಿ.ಟಿ ಅಧ್ಯಕ್ಷತೆ ವಹಿಸಿದ್ದರು. ಕೊಯಿಲ ಗ್ರಾಮ ಪಂಚಾಯಿತಿ ಸದಸ್ಯ ಹರ್ಷಿತ್ ಕುಮಾರ್, ಆಲಂಕಾರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರವಿ ಪೂಜಾರಿ, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ವಿಶ್ವನಾಥ ಗೌಡ, ಕೊಯಿಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂದೇಶ್, ಶಿಕ್ಷಣ ಇಲಾಖಾ ಸಮೂಹ ಸಂಪನ್ಮೂಲ ವ್ಯಕ್ತಿ ಮಹೇಶ್, ಕಡಬ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಮಕೃಷ್ಣ ಮಲ್ಲಾರ ಶುಭಹಾರೈಸಿದರು. ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಐ.ಕ್ಯೂ. ಎ.ಸಿ ಸಂಯೋಜಕಿ ಲತಾ, ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿ ನಮಿತಾ, ರಾಷ್ಟ್ರೀಯ ಸೇವಾ ಯೋಜನೆಯ ಘಟಕ ನಾಯಕರಾದ ನಿತೀಶ್ ಕೆ.ಯು, ನವ್ಯಶ್ರೀ ಪಿ.ಎಚ್, ಸಂದೀಪ್ ಕುಮಾರ್, ಹೃತಿಕ್ ಸಿ.ಎ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಆರತಿ ಕೆ. ಸ್ವಾಗತಿಸಿದರು. ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನಿ ಸುಜಾತ ಎಂ. ವಂದಿಸಿದರು. ಸ್ವಯಂ ಸೇವಕಿ ಕಲ್ಪನಾ ಕಾರ್ಯಕ್ರಮ ನಿರೂಪಿಸಿದರು.