ಶೈಕ್ಷಣಿಕ ಪ್ರವಾಸಕ್ಕೆ ನೆರವು ಕೋರಿ ಕೆಮ್ಮಾರ ಶಾಲಾ ವಿದ್ಯಾರ್ಥಿಯಿಂದ ಶಾಸಕರಿಗೆ ಪತ್ರ

0

ಕೆಮ್ಮಾರ: ಶೈಕ್ಷಣಿಕ ಪ್ರವಾಸಕ್ಕೆ ನೆರವು ಕೋರಿ ಕೆಮ್ಮಾರ ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆಯ 4ನೇ ತರಗತಿಯ ವಿದ್ಯಾರ್ಥಿ ಅಬ್ದುಲ್ ಖಾದರ್ ಎಂಬವರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಯವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಡಿಸೆಂಬರ್ ತಿಂಗಳಿನಲ್ಲಿ ನಮ್ಮ ಕೆಮ್ಮಾರ ಶಾಲೆಯಿಂದ ಶೈಕ್ಷಣಿಕ ಪ್ರವಾಸವನ್ನು ಹಮ್ಮಿಕೊಳ್ಳಲಾಗಿದೆ. ನಮ್ಮ ಶಾಲೆಯಲ್ಲಿ ಒಟ್ಟು 110 ವಿದ್ಯಾರ್ಥಿಗಳಿದ್ದರೂ ಶೈಕ್ಷಣಿಕ ಪ್ರವಾಸಕ್ಕೆ ಬೆರಳೆಣಿಕೆಯಷ್ಟು ವಿದ್ಯಾರ್ಥಿಗಳು ಮಾತ್ರ ಹೆಸರು ಕೊಟ್ಟಿರುತ್ತಾರೆ. ನನ್ನ ಹೆಸರನ್ನು ಕೂಡ ನೀಡಿರುತ್ತೇನೆ. ಆದರೆ ನನ್ನ ಜೊತೆಗೆ ನಮ್ಮ ಶಾಲೆಯಲ್ಲಿ ಕಲಿಯುತ್ತಿರುವ ಸಹಪಾಠಿಗಳಲ್ಲಿ ಹೆಚ್ಚಿನವರು ಬಡವರಾಗಿದ್ದು ಆರ್ಥಿಕವಾಗಿ ಹಿಂದುಳಿದವರಾಗಿದ್ದಾರೆ. ಇದರಿಂದ ನಾನು ಮಾತ್ರ ಪ್ರವಾಸ ಹೇಗೆ ಹೋಗಲಿ? ಹೋದರೂ ಪ್ರವಾಸವನ್ನು ಹೇಗೆ ಆನಂದಿಸಲಿ?. ಎಲ್ಲಾ ರೀತಿಯ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸುವ ತಾವು ಈ ಮನವಿಗೆ ಸ್ಪಂದಿಸಿ ನನ್ನ ಸಹಪಾಠಿಗಳೆಲ್ಲರೂ ಪ್ರವಾಸಕ್ಕೆ ಬರುವಂತೆ ವ್ಯವಸ್ಥೆಯನ್ನು ಮಾಡಿಕೊಡುವಂತೆ ವಿದ್ಯಾರ್ಥಿ ಅಬ್ದುಲ್ ಖಾದರ್ ಪತ್ರ ಬರೆದು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here