ಪುತ್ತೂರು: ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ನಿ. ಸಹಭಾಗಿತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಡಿ.12ರಂದು ಪೂರ್ವಾಹ್ನ 11.00 ಗಂಟೆಗೆ, ಬಲ್ಮಠ ಸರಕಾರಿ ಪದವಿ ಪೂರ್ವ ಮಹಿಳಾ ಕಾಲೇಜಿನಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ. ಪ್ರಬಂಧ ಸ್ಪರ್ಧೆಯ ವಿಷಯ: ‘ರಾಷ್ಟ್ರದ ಅರ್ಥ ವ್ಯವಸ್ಥೆಯ ಬೆಳವಣಿಗೆಗಳಲ್ಲಿ ಸಹಕಾರಿ ವಲಯದ ಪಾತ್ರ’ (Role of cooperative sector in the economic system of the country)
ಪ್ರಬಂಧ ಸ್ಪರ್ಧೆಗೆ ಒಂದು ಶಾಲೆಯಿಂದ ಒಬ್ಬರು ಅಥವಾ ಇಬ್ಬರು ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ. ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದ 3 ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಪರ್ಧೆಗೆ ಅರ್ಹರಾಗುತ್ತಾರೆ. ಭಾಗವಹಿಸುವ ಸ್ಪರ್ಧಿಗಳಿಗೆ ಬಸ್ಸಿನ ದರ ಹಾಗೂ ಲಘು ಉಪಾಹಾರ ನೀಡಲಾಗುವುದು ಎಂದು ದ.ಕ.ಜಿಲ್ಲಾ ಉಪನಿರ್ದೇಶಕರು ತಿಳಿಸಿದ್ದಾರೆ.