ಡಿ.5: ಕೂರೇಲು ಶ್ರೀ ಮಲರಾಯ ದೈವಸ್ಥಾನದಲ್ಲಿ ನೇಮೋತ್ಸವ ಸಂಭ್ರಮ

0

ಪುತ್ತೂರು: ಹತ್ತು ಹಲವು ಕಾರಣಿಕತೆಗಳ ಮೂಲಕ ಭಕ್ತಾಧಿಗಳ ಇಷ್ಟಾರ್ಥಗಳನ್ನು ಈಡೇರಿಸುತ್ತಾ ಬಂದಿರುವ ಆರ್ಯಾಪು ಗ್ರಾಮದ ಕೂರೇಲು ಶ್ರೀ ಮಲರಾಯ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವವು ಡಿ.5 ರಂದು ವಿಜೃಂಭಣೆಯಿಂದ ಜರಗಲಿದೆ. ಬೆಳಿಗ್ಗೆ ದೇವತಾ ಪ್ರಾರ್ಥನೆ ನಡೆದು ಸ್ವಸ್ತಿ ಪುಣ್ಯಾಹವಾಚನ, ಸ್ಥಳಶುದ್ದಿ, ಗಣಪತಿ ಹೋಮ, ನಾಗತಂಬಿಲ, ಹರಿಸೇವೆ ನಡೆದು ಧರ್ಮದೈವಗಳ ಕಲಶಾಭಿಷೇಕ, ತಂಬಿಲ ಸೇವೆ ಬಳಿಕ ಮಹಾಪೂಜೆ ನಡೆಯಲಿದೆ. ಮಹಾಪೂಜೆಯ ಬಳಿಕ ಭಕ್ತಾಧಿಗಳಿಗೆ ಪ್ರಸಾದ ವಿತರಣೆ ನಡೆದು ಅನ್ನಸಂತರ್ಪಣೆ ನಡೆಯಲಿದೆ.

ಸಂಜೆ 6 ಗಂಟೆಗೆ ಸರಿಯಾಗಿ ದೈವಗಳ ಭಂಡಾರ ತೆಗೆಯುವ ಕಾರ್ಯಕ್ರಮ ನಡೆದು ರಾತ್ರಿ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 9 ಗಂಟೆಯಿಂದ ಕಳಲ್ತಾ ಗುಳಿಗ ದೈವದ ನೇಮೋತ್ಸವ, ಕುಟುಂಬದಲ್ಲಿ ಅಗಲಿದ ಹಿರಿಯರಿಗೆ ಪ್ರಾರ್ಥನೆ, ಬಡಿಸುವ ಕಾರ್ಯಕ್ರಮ ನಡೆಯಲಿದೆ. ಆ ಬಳಿಕ ಶ್ರೀ ಕ್ಷೇತ್ರದ ಪ್ರಧಾನ ದೈವಗಳಾದ ಶ್ರೀ ಮಲರಾಯ ಮತ್ತು ಮಲರಾಯ ಬಂಟ ಮಹಿಶಾಂತಾಯ ದೈವಗಳ ನೇಮೋತ್ಸವ ಆರಂಭಗೊಳ್ಳಲಿದೆ. ಮರುದಿನ ಅಂದರೆ ಡಿ.6 ರಂದು ಬೆಳಿಗ್ಗೆ ನೇಮೋತ್ಸವ ಸಮಾಪ್ತಿಗೊಂಡು ಸೇರಿದ ಭಕ್ತಾಧಿಗಳಿಗೆ ಪ್ರಸಾದ ವಿತರಣೆ ನಡೆಯಲಿದೆ. ಸಂಜೆ 7 ಗಂಟೆಯಿಂದ ಕ್ಷೇತ್ರದ ಇತರ ದೈವಗಳಿಗೆ ತಂಬಿಲ ಸೇವೆ ನಡೆಯಲಿದೆ. ಈ ನೇಮೋತ್ಸವದಲ್ಲಿ ಕೂರೇಲು ಕುಟುಂಬಸ್ಥರು, ಬಂಧು ಮಿತ್ರರು, ಊರಪರವೂರ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೈವಗಳ ಗಂಧ ಪ್ರಸಾದ ಸ್ವೀಕರಿಸಿ ದೈವಗಳ ಕೃಪೆಗೆ ಪಾತ್ರರಾಗುವಂತೆ ಕೂರೇಲು ಶ್ರೀ ಮಲರಾಯ ದೈವಸ್ಥಾನದ ಆಡಳಿತ ಮೊಕ್ತೇಸರ ಕೆ.ಸಂಜೀವ ಪೂಜಾರಿ ಕೂರೇಲುರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here