ಡಿ.5 : ಪಾಲ್ತಾಡಿಯ ಕುಂಜಾಡಿಯಲ್ಲಿ ದೇಸಿ ಹಾಗೂ ಮಿಶ್ರತಳಿ ಹೆಣ್ಣು ಕರು ಮತ್ತು ಕಡಸುಗಳ ಪ್ರದರ್ಶನ, ಬರಡು ರಾಸು ಚಿಕಿತ್ಸಾ ಶಿಬಿರ

0

ಸವಣೂರು : ದ.ಕ.ಜಿ.ಪಂ. ಪಶು ಪಾಲನಾ ಮತ್ತು ವೈದ್ಯಕೀಯ ಸೇವಾ ಇಲಾಖೆ ಸುಳ್ಯ, ಹಾಲು ಉತ್ಪಾದಕರ ಸಹಕಾರಿ ಸಂಘ ಮುಕ್ಕೂರು, ಹಾಲು ಉತ್ಪಾದಕರ ಸಹಕಾರಿ ಸಂಘ ಬಂಬುಲ ಇದರ ಸಂಯುಕ್ತ ಆಶ್ರಯದಲ್ಲಿ ದ.ಕ.ಜಿ.ಪಂ.ವಿಸ್ತರಣಾ ಘಟಕಗಳ ಬಲಪಡಿಸುವಿಕೆ 2023-24ನೇ ಸಾಲಿನ ಅನುದಾನದಲ್ಲಿ ದೇಸಿ ಹಾಗೂ ಮಿಶ್ರತಳಿ ಹೆಣ್ಣು ಕರು ಮತ್ತು ಕಡಸುಗಳ ಪ್ರದರ್ಶನ, ಬರಡು ರಾಸು ಚಿಕಿತ್ಸಾ ಶಿಬಿರ ಡಿ.5ರಂದು ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ಕುಂಜಾಡಿ ಗಣೇಶ್‌ ಶೆಟ್ಟಿ ಅವರ ಮನೆಯ ವಠಾರದಲ್ಲಿ ಬೆಳಿಗ್ಗೆ 9ರಿಂದ ನಡೆಯಲಿದೆ.

ಕಾರ್ಯಕ್ರಮವನ್ನು ದ.ಕ.ಹಾಲು ಉತ್ಪಾದಕರ ಸಹಕಾರಿ ಒಕ್ಕೂಟದ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಪೆರುವಾಜೆ ಗ್ರಾ.ಪಂ.ಅಧ್ಯಕ್ಷ ಜಗನ್ನಾಥ ಪೂಜಾರಿ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಹಕಾರಿ ರತ್ನ ದ.ಕ.ಹಾಲು ಉತ್ಪಾದಕರ ಸಹಕಾರಿ ಒಕ್ಕೂಟದ ಮಾಜಿ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ಅತಿಥಿಗಳಾಗಿ ಸವಣೂರು ಗ್ರಾ.ಪಂ.ಅಧ್ಯಕ್ಷೆ ಸುಂದರಿ ಬಿ.ಎಸ್‌, ದ.ಕ.ಹಾಲು ಉತ್ಪಾದಕರ ಸಹಕಾರಿ ಒಕ್ಕೂಟದ ಉಪಾಧ್ಯಕ್ಷ ಎಸ್.ಬಿ.ಜಯರಾಮ ರೈ, ಬೆಳ್ಳಾರೆ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಶ್ರೀರಾಮ ಪಾಟಾಜೆ, ಕೊಳ್ತಿಗೆ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ವೆಂಕಟರಮಣ ಕೆ.ಎಸ್.‌, ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ, ಬಂಬಿಲ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಜಯಪ್ರಕಾಶ್‌ ಎನ್.ಆರ್.‌, ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷೆ ಮಮತಾ ದೇವಸ್ಯ, ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ಗಣೇಶ್‌ ಶೆಟ್ಟಿ ಕುಂಜಾಡಿ, ದ.ಕ.ಹಾಲು ಉತ್ಪಾದಕರ ಸಹಕಾರಿ ಒಕ್ಕೂಟದ ಉಪವ್ಯವಸ್ಥಾಪಕ ಡಾ.ಸತೀಶ್‌ ರಾವ್‌ ಪಾಲ್ಗೊಳ್ಳುವರು ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here