ರಾಮಕುಂಜ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಉಪನಿರ್ದೇಶಕರ ಕಛೇರಿ (ಆಡಳಿತ) ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಇವರ ಸಹಯೋಗದೊಂದಿಗೆ ಪುತ್ತೂರು ಕೊಂಬೆಟ್ಟು ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ನಡೆದ 17ರ ವಯೋಮಾನದ ಪ್ರೌಢಶಾಲಾ ಬಾಲಕ-ಬಾಲಕಿಯರ ಕ್ರೀಡಾಕೂಟದ ವೇಗದ ನಡಿಗೆ ಸ್ಪರ್ಧೆಯಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿ ವಿಲಾಸ್ ಗೌಡ ಪಿ.ಪ್ರಥಮ ಸ್ಥಾನ ಪಡೆದುಕೊಂಡು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರಾಷ್ಟ್ರಮಟ್ಟದ ಕ್ರೀಡಾಕೂಟ ಪಾಟ್ನಾದಲ್ಲಿ ನಡೆಯಲಿದೆ. ಸಂಸ್ಥೆಯ ಕಾರ‍್ಯದರ್ಶಿ ಕೆ.ಸೇಸಪ್ಪ ರೈ ಇವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರೇಮಾ ಬಿ ಹಾಗೂ ರಾಘವ್‌ರವರು ತರಬೇತಿ ನೀಡಿರುತ್ತಾರೆ. ಸಂಸ್ಥೆಯ ಆಡಳಿತಾಧಿಕಾರಿ ಆನಂದ್ ಎಸ್.ಟಿ, ಸಂಸ್ಥೆಯ ವ್ಯವಸ್ಥಾಪಕ ರಮೇಶ್ ರೈ ಆರ್.ಬಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಯು.ಎನ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಲೋಹಿತಾ ಎ ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಸಹಕರಿಸಿದ್ದರು. ಈತ ಮಂಡ್ಯ ಜಿಲ್ಲೆ ದುದ್ದ ಹೋಬಳಿಯ ಕೆ.ಎಸ್.ಪ್ರಶಾಂತ್ ಕುಮಾರ್ ಹಾಗೂ ಶಶಿರೇಖಾ ದಂಪತಿಯ ಪುತ್ರ.