ರಾಮಕುಂಜ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ (ಆಡಳಿತ), ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಮಂಗಳೂರು ದಕ್ಷಿಣ ಹಾಗೂ ಶ್ರೀ ರಾಮಕೃಷ್ಣ ಆಂಗ್ಲ ಮಾಧ್ಯಮ ಶಾಲೆ, ಬಂಟ್ಸ್ ಹಾಸ್ಟಲ್, ಮಂಗಳೂರು ಇವರ ಸಹಭಾಗಿತ್ವದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ 2023 ಸ್ಪರ್ಧೆಯಲ್ಲಿ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪ್ರಜ್ಞಾ (9ನೇ) ತುಳು ಭಾಷಣ ದ್ವಿತೀಯ ಹಾಗೂ ಶರಣ್ಯ ಶೆಟ್ಟಿ (8ನೇ)ಹಿಂದಿ ಭಾಷಣದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.
ಇವರಿಗೆ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ, ಸಂಸ್ಥೆಯ ಆಡಳಿತಾಧಿಕಾರಿ ಆನಂದ ಎಸ್.ಟಿ, ವ್ಯವಸ್ಥಾಪಕರಾದ ರಮೇಶ್ ರೈ ಆರ್.ಬಿ, ಪ್ರೌಢಶಾಲಾ ಮುಖ್ಯಗುರು ಗಾಯತ್ರಿ ಯು.ಎನ್, ತಾಂತ್ರಿಕ ಸಲಹೆಗಾರರಾದ ಜಯೇಂದ್ರ ಬಿ, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯಗುರು ಲೋಹಿತಾ ಎ ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಶುಭ ಹಾರೈಸಿದರು.