ಅಜಲಡ್ಕ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ

0

ನಿಡ್ಪಳ್ಳಿ: ಅಜಲಡ್ಕದ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ ಡಿ. 1ರಂದು ನಡೆಯಿತು. ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಬಾಲವಿಕಾಸ ಸಮಿತಿ ಅಧ್ಯಕ್ಷೆ ನಳಿನಿ ಸುನಿಲ್ ಅರಂತನಡ್ಕ ಅಧ್ಯಕ್ಷತೆ ವಹಿಸಿದ್ದರು.

ಆರೋಗ್ಯ ಇಲಾಖೆಯ ವಿದ್ಯಾಶ್ರೀ, ಆಶಾ ಕಾರ್ಯಕರ್ತೆ ಗಿರಿಜ ಹಾಗೂ ಮಹಿಳಾ ಮಂಡಳಿ ಅಧ್ಯಕ್ಷೆ ಪ್ರಮೋದಿನಿ ಉಪಸ್ಥಿತರಿದ್ದರು. ಮಕ್ಕಳ ಆಟೋಟ ಸ್ಪರ್ಧೆಗಳ ಬಹುಮಾನವನ್ನು ಪ್ರಮೋದಿನಿ ವಿತರಿಸಿದರು. ಹಾಗೂ ಪ್ರೋತ್ಸಾಹಕ ಬಹುಮಾನವನ್ನು ಬಾಲವಿಕಾಸ ಸಮಿತಿಯ ಅಧ್ಯಕ್ಷೆ ನಳಿನಿ ಸುನಿಲ್ ರೈ ವಿತರಿಸಿದರು. ಬಾಲವಿಕಾಸ ಸಮಿತಿ ಪದಾಧಿಕಾರಿಗಳು, ಪೋಷಕರು, ಸ್ತ್ರೀ ಶಕ್ತಿ ಸಂಘದ ಸದಸ್ಯರು ಸಹಕಾರ ನೀಡಿದರು. ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಸೀತಾಕುಮಾರಿ ಸ್ವಾಗತಿಸಿದರು. ಸರೋಜ ರೈ ವಂದಿಸಿದರು. ಅಂಗನವಾಡಿ ಕೇಂದ್ರದ ಸಹಾಯಕಿ ನಳಿನಿ ಸಹಕರಿಸಿದರು.

ಅಂಗನವಾಡಿ ಕೇಂದ್ರಕ್ಕೆ ಕೊಡುಗೆ:        
ವಿದ್ಯಾಶ್ರೀ ಗುಂಪಿನ ಲಾವಣ್ಯ ರೈ ಅಂಗನವಾಡಿ ಕೇಂದ್ರಕ್ಕೆ ಸ್ಟೀಲ್ ಡಬ್ಬವನ್ನು ಕೊಡುಗೆಯಾಗಿ ನೀಡಿದರು. ಅಂಗನವಾಡಿ ಕಾರ್ಯಕರ್ತೆ ಉಷಾ ರಾಮಕೃಷ್ಣ ಅಜಲಡ್ಕ ಮತ್ತು ಸಹಾಯಕಿ ನಳಿನಿ ಮಕ್ಕಳಿಗೆ ಕುರ್ಚಿಯನ್ನು ಕೊಡುಗೆಯಾಗಿ ನೀಡಿದರು.

LEAVE A REPLY

Please enter your comment!
Please enter your name here