ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿಣ್ಣರ  ಕ್ರೀಡೋತ್ಸವ

0

ಪುತ್ತೂರು:ಬಾಲ್ಯದಿಂದಲೇ ಕ್ರೀಡಾ ಮನೋಭಾವ ಮೂಡಿಸಿಕೊಂಡು ಸದೃಢ ಶರೀರ ಬೆಳೆಸಿಕೊಳ್ಳುವುದು ಮಗುವಿನ ಶಾರೀರಿಕ ಹಾಗೂ ಮಾನಸಿಕ ಬೆಳವಣಿಗೆಗೆ ಪೂರಕ ಎಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ರಕ್ಷಕಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಹರಿಣಾಕ್ಷಿ. ಜೆ. ಶೆಟ್ಟಿ ಹೇಳಿದರು. ಅವರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿಣ್ಣರ ಕ್ರೀಡೋತ್ಸವ202324 ಉದ್ಘಾಟಿಸಿ ಮಾತನಾಡುತ್ತಿದ್ದರು. ಇಂತಹ ಚಟುವಟಿಕೆಗಳಿಂದ ಮಗುವಿನ ನೈಜ ಪ್ರತಿಭೆ ಬೆಳಕಿಗೆ ಬರುತ್ತದೆ ಎಂದು ಅವರು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್. ಎಂ ಹಾಗೂ ಸದಸ್ಯರಾದ ಶ್ರೀಮತಿ ಮಾಲಾ ಮಹೇಶ್ ಶುಭ ಹಾರೈಸಿದರು.

ಸಹಶಿಕ್ಷಕಿ ಶ್ರೀಮತಿ ವಿದ್ಯಾ ಸರಸ್ವತಿ ಸ್ವಾಗತಿಸಿ, ಕವಿತಾ ಸತೀಶ್ ವಂದಿಸಿದರು.  ಸಹನಾ ಪೈ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಶಾಲಾ ಮುಖ್ಯೋಪಾಧ್ಯಾಯರುಗಳ ಮಾರ್ಗದರ್ಶನದಲ್ಲಿ, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಸಹಶಿಕ್ಷಕರ ಸಹಕಾರದಲ್ಲಿ ಪೂರ್ವ ಪ್ರಾಥಮಿಕದಿಂದ 4ನೇ ತರಗತಿವರೆಗಿನ ಮಕ್ಕಳಿಂದ ಆಕರ್ಷಕ ಪಥಸಂಚಲನ ನಡೆಸಿ, ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಶಾಲಾ ಆಡಳಿತ ಮಂಡಳಿ ಸದಸ್ಯರು ಮತ್ತು ಪೋಷಕ ಬಂಧುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here