ಪುತ್ತೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ಹಾಗೂ ಇತರ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಅಗತ್ಯವಾದ ಪ್ರವೇಶ ಪರೀಕ್ಷೆ ಮತ್ತು ಅನ್‌ಲೈನ್ ಕೌನ್ಸಿಲಿಂಗ್‌ನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಸಲಾಗುವುದು. 5ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳು 6ನೇ ತರಗತಿಗೆ ಪ್ರವೇಶ ಪಡೆಯಲು ಡಿ.7ರಿಂದ 31ರವರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ, ಕಾಲೇಜುಗಳ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ 2024ರ ಫೆ.18ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪರೀಕ್ಷೆ ನಡೆಯಲಿದೆ. ಅರ್ಜಿ ಸಲ್ಲಿಸುವ ವಿಧಾನ ಹಾಗೂ ಮಾಹಿತಿ ಪುಸ್ತಕವನ್ನು ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನಲ್ಲಿ ಮತ್ತು ವಸತಿ ಶಿಕ್ಷಣ ಸಂಸ್ಥೆಗಳ ವೆಬ್‌ಸೈಟ್ http://kreis.kar.nic.in ನಲ್ಲಿ 2024ರ ಫೆ.1ರಿಂದ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ