ಕಾವು: ಆರಿಯಡ್ಕ ಗ್ರಾಮ ಪಂಚಾಯತ್ ,ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮತ್ತು ಅವನಿ ಫೌಂಡೇಶನ್ ಪುತ್ತೂರು ಹಾಗೂ ಕಂಪನಿಯೋ ನೆಮ್ಮದಿ ವೇಲ್ ನೆಸ್ ಸೆಂಟರ್ ಪುತ್ತೂರು ಇದರ ಸಹಯೋಗದೊಂದಿಗೆ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ ಕಾರ್ಯಕ್ರಮದ ಉದ್ಘಾಟನೆ ಕಾವು ಕೃಷಿ ಪತ್ತಿನ ಸಹಕಾರಿ ಸಂಘದ ಪಂಚಾಮೃತ ಸಭಾಭವನದಲ್ಲಿ ಡಿ 6 ರಂದು ನಡೆಯಿತು.
ಕಾರ್ಯಕ್ರಮವನ್ನು ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ನನ್ಯ ಅಚ್ಚುತ ಮೂಡಿತ್ತಾಯ ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.ನೆಮ್ಮದಿ ವೆಲ್ ಸೆಂಟರ್ ನ ಪ್ರಭಾಕರ್ ಸಾಲ್ಯಾನ್ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿ ಶಿಬಿರವು ಡಿ 6 ರಿಂದ ಡಿ 20 ರ ವರೆಗೆ ನಡೆಯಲಿದ್ದು ಗ್ರಾಮಸ್ಥರು ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ವಿನಂತಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆರಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ಮಣಿಯಾಣಿ, ಮುಖ್ಯ ಅತಿಥಿಗಳಾಗಿ ಮಾಡ್ನೂರು ಹಾಲು ಉತ್ಪಾದಕರ ಸಹಕಾರಿ ಸಂಘ ಕಾವು ಇದರ ಅಧ್ಯಕ್ಷರಾದ ಕೃಷ್ಣ ಪ್ರಸಾದ್ ಕೊಚ್ಚಿ,ಅವನಿ ಫೌಂಡೇಶನ್ ಪುತ್ತೂರು ಇದರ ಅಧ್ಯಕ್ಷರಾದ ನಿತೀಶ್ ಕುಮಾರ್ ಶಾಂತಿವನ,ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೇಶವ ಮೂರ್ತಿ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಕೇಶವಮೂರ್ತಿ ಸ್ವಾಗತಿಸಿ, ಅರಿಯಡ್ಕ ಗ್ರಾಮ ಪಂಚಾಯತ್ ಸದಸ್ಯರಾದ ಲೋಕೇಶ್ ಚಾಕೋಟೆ ವಂದಿಸಿ ಕಾರ್ಯಕ್ರಮ ನಿರ್ವಹಿಸಿದರು.