ಮಹಬ್ಬ- 2 ಫ್ಯಾಮಿಲಿ ಫೆಸ್ಟ್ ಪೋಸ್ಟರ್ ಬಿಡುಗಡೆಗೊಳಿಸಿದ ಇಂಡಿಯನ್ ಗ್ರ್ಯಾಂಡ್ ಮುಫ್ತಿ

0

ದುಬೈ: ವಿದೇಶಿ ಕನ್ನಡಿಗರ ಅತೀ ದೊಡ್ಡ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ ತನ್ನ ಎರಡನೇ ಆವೃತ್ತಿಯ ಮಹಬ್ಬ ಫ್ಯಾಮಿಲಿ ಫೆಸ್ಟ್ -2024ರ ಫೆ. 11ರಂದು ನಡೆಯಲಿದ್ದು, ಕಾರ್ಯಕ್ರಮದ ಪೋಸ್ಟರ್ ನ್ನು ದುಬೈ ಮರ್ಕಝ್ ನಲ್ಲಿ‌ ನಡೆದ ಸರಳ ಕಾರ್ಯಕ್ರಮದಲ್ಲಿ ಇಂಡಿಯನ್ ಗ್ರಾಂಡ್ ಮುಫ್ತಿ ಎ ಪಿ ಅಬೂಬಕ್ಕರ್ ಮುಸ್ಲಿಯಾರ್‌ ಬಿಡುಗಡೆಗೊಳಿಸಿದರು.

ಈ ಕಾರ್ಯಕ್ರಮದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ ಖಾದರ್, ಯು.ಟಿ ಇಫ್ತಿಕರ್, ಬನ್ಯಾಸ್ ಸ್ಪೈಕ್ ಹಾಜಿ ಅಬ್ದುಲ್ ರಹಿಮಾನ್, ಕೆಸಿಎಫ್ ಅಂತರಾಷ್ಟ್ರೀಯ ಸಂಘಟನಾ ಸಮಿತಿಯ ಅಧ್ಯಕ್ಷ ಅಬ್ದುಲ್ ಜಲೀಲ್ ನಿಝಾಮಿ, ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿ ಉಪಾಧ್ಯಕ್ಷ ಝೈನುದ್ದೀನ್ ಹಾಜಿ, ‌ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಮೂಸ ಹಾಜಿ ಬಸರ,‌ ಕೆಸಿಎಫ್ ಯುಎಇ ಶೈಕ್ಷಣಿಕ ವಿಭಾಗ ಅಧ್ಯಕ್ಷ ಶಾಹುಲ್ ಹಮೀದ್ ಸಖಾಫಿ,‌ ಶುಕೂರ್ ಹಾಜಿ ಉಳ್ಳಾಲ,‌ ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿ ನಾಯಕರು ಹಾಗೂ ಇನ್ನಿತರ ಗಣ್ಯ ವ್ಯಕ್ತಿಗಳು ಉಪಸ್ಥಿತರಿದ್ದರು.

ರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ಈ ಸಡಗರದಲ್ಲಿ ಯುಎಇ ಯಲ್ಲಿರುವ ಎಲ್ಲಾ ಕನ್ನಡಿಗರು ತಮ್ಮ ಕುಟುಂಬದೊಂದಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಯಶಸ್ವಿಗೆ ಎಲ್ಲರೂ ಕೈಜೋಡಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here