ಪುತ್ತೂರು: ಪುತ್ತಿಲ ಪರಿವಾರದ ವತಿಯಿಂದ ಡಿ.24 ಮತ್ತು 25ರಂದು ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ ನಡೆಯುವ ಹಿನ್ನೆಲೆಯಲ್ಲಿ ಡಿ.8ರಂದು ಬೆಳಿಗ್ಗೆ ಚಪ್ಪರ ಮುಹೂರ್ತ ನೆರವೇರಿತು.
ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರು ಚಪ್ಪರ ಮುಹೂರ್ತ ನೆರವೇರಿಸಿದರು. ಈ ಸಂದರ್ಭ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಶ್ರೀನಿವಾಸ ಕಲ್ಯಾಣೋತ್ಸವ ಸ್ವಾಗತ ಸಮಿತಿ ಅಧ್ಯಕ್ಷರು ಕಿರಣ್ ಗೌಡ, ಉಪಾಧ್ಯಕ್ಷರುಗಳಾದ ಪ್ರವೀಣ್ ಶೆಟ್ಟಿ ತಿಂಗಳಾಡಿ, ಸ್ವಾಗತ ಸಮಿತಿ ಸಂಚಾಲಕರಾದ ಗಣೇಶ್ ಭಟ್ ಮಕರಂದ, ಮಹಿಳಾ ಘಟಕದ ಅಧ್ಯಕ್ಷರಾದ ಮಲ್ಲಿಕಾ ಪ್ರಸಾದ್, ಜಯಲಕ್ಷ್ಮೀ, ಅಶ್ವಿನಿ ಸಂಪ್ಯ, ಕಲ್ಯಾಣೋತ್ಸವ ಪ್ರಧಾನ ಕಾರ್ಯದರ್ಶಿ ಮನೀಶ್ ಕುಲಾಲ್, ಪುತ್ತಿಲ ಪರಿವಾರದ ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲು, ರವಿ ರೈ ಕೆದಂಬಾಡಿ ಮಠ, ಗೋಪಾಲಕೃಷ್ಣ ಭಟ್, ಆರ್ಯಾಪು ಗ್ರಾ.ಪಂ ಸದಸ್ಯ ಪವಿತ್ರಾ ರೈ ಬಾಳಿಲ, ಸದಾಶಿವ ಶೆಟ್ಟಿ ಪಟ್ಟೆ, ಭೀಮಯ್ಯ ಭಟ್, ಅರುಣ್ ಭಟ್, ರಾಜೇಶ್ ಭಟ್ ಕುಳ, ರವಿ ಕೃಷ್ಣನಗರ, ಪ್ರವೀಣ್ ಭಂಡಾರಿ, ಅನಿಲ್ ತೆಂಕಿಲ, ಅಶೋಕ್ ಕುಮಾರ್ ಪುತ್ತಿಲ, ಪುರುಷೋತ್ತಮ ಕೋಲ್ಪೆ, ಗಿತೇಶ್, ಜಯಪ್ರಕಾಶ್ , ರತ್ನಾಕರ್ ನಾಕ್ ಸಹಿತ ನೂರಾರು ಪದಾಧಿಕಾರಿಗಳು ಉಪಸ್ಥಿತರಿದ್ದರು.