ನಾಳೆ(ಡಿ.9) :ಹಾರಾಡಿ ಬಾಲಕಿಯರ ವಸತಿ ನಿಲಯದಲ್ಲಿ ಅಂಬೇಡ್ಕರ್ ಓದು ಭಾಷಣ ಸ್ಪರ್ಧೆ

0

ಪುತ್ತೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಸ್ವರ ಮಾಧುರ್ಯ ಸಂಗೀತ ಬಳಗ ಪುತ್ತೂರು, ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಹಾರಾಡಿ ಇದರ ಸಂಯುಕ್ತ ಆಶ್ರಯದಲ್ಲಿ ‘ ಅಂಬೇಡ್ಕರ್ ಓದು’ ಕಾರ್ಯಕ್ರಮದ ಪ್ರಯುಕ್ತ ಭಾಷಣ ಸ್ಪರ್ಧೆ ಡಿ.9 ರಂದು ಅಪರಾಹ್ನ ಹಾರಾಡಿ ವಸತಿ ನಿಲಯದಲ್ಲಿ ನಡೆಯಲಿದೆ.

ನ್ಯಾಯವಾದಿ ಕುಂಬ್ರ ದುರ್ಗಾಪ್ರಸಾದ್ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿ.ಎಂ ಮೋಹನ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದು, ರಾಜ್ಯಮಟ್ಟದ ತರಬೇತುದಾರ ಮಹಮ್ಮದ್ ಬಡಗನ್ನೂರು ಉಪನ್ಯಾಸ ನೀಡಲಿದ್ದಾರೆ. ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ, ಮಹಿಳಾ ಪೊಲೀಸ್ ಅಧಿಕಾರಿ ಚೈತ್ರಾ ಪಿ.ಸಿ, ಪತ್ರಕರ್ತ ಸಿಶೇ ಕಜೆಮಾರ್, ಗಾಯಕಿ ಪೂರ್ಣೀಮಾ ಕೃಷ್ಣರಾಜ್ ಭಾಗವಹಿಸಲಿದ್ದಾರೆ. ಅಂಬೇಡ್ಕರ್ ಅವರ ತತ್ವ ಮತ್ತು ಸಿದ್ಧಾಂತಗಳ ಮಹತ್ವ ಎಂಬ ವಿಷಯದಲ್ಲಿ ಭಾಷಣ ಸ್ಪರ್ಧೆ ನಡೆಯಲಿದೆ. ಸಂಜೆ ಬಹುಮಾನ ವಿತರಣೆ ನಡೆಯಲಿದ್ದು ಪೊಲೀಸ್ ಉಪನಿರೀಕ್ಷಕ ಆಂಜನೇಯ ರೆಡ್ಡಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸ್ವರ ಮಾಧುರ್ಯ ಸಂಗೀತ ಬಳಗದ ಸಲಹೆಗಾರ ಜನಾರ್ದನ್ ಬಿ ಹಾಗೂ ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here