ಪುತ್ತೂರು: 6 ವರ್ಷಗಳ ಹಿಂದೆ ನಡೆದಿರುವ ಪತ್ರಕರ್ತೆ ಹಾಗೂ ಸಾಮಾಜಿಕ ಕಾರ್ಯಕರ್ತ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣದ 11ನೇ ಆರೋಪಿಯಾಗಿರುವ ಪುತ್ತೂರು ಚಿಕ್ಕಮುಡ್ನೂರು ಕೆಮ್ಮಾಯಿ ಮೂಲದದವರಾಗಿದ್ದು, ಸುಳ್ಯ ತಾಲೂಕಿನ ಸಂಪಾಜೆ ನಿವಾಸಿ ಮೋಹನ್ ನಾಯಕ್ ಅವರಿಗೆ ರಾಜ್ಯ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಗೌರಿ ಲಂಕೇಶ್ ಅವರು 2017ರ ಸೆ.5ರಂದು ಹತ್ಯೆಗೀಡಾಗಿದ್ದು, ತನಿಖೆಗಾಗಿ ವಿಶೇಷ ತನಿಖಾ ದಳ ರಚಿಸಲಾಗಿತ್ತು. ಹತ್ಯೆ ಪ್ರಕರಣದಲ್ಲಿ 18 ಆರೋಪಿಗಳು ಬಂಧನಕ್ಕೊಳಗಾಗಿದ್ದು, 1200 ಪುರಾವೆ ಹಾಗೂ 438 ಸಾಕ್ಷ್ಯ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದೆ.ವಿಚಾರಣೆ ನಡೆಸಿರುವ ವಿಶೇಷ ನ್ಯಾಯಾಲಯ ತೀರ್ಪು ಕಾಯ್ದಿರಿಸಿದ 45 ದಿನಗಳ ಬಳಕ ಆರೋಪಿ ಮೋಹನ್ ನಾಯಕ್ ಅವರಿಗೆ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಅವರಿದ್ದ ಏಕ ಸದಸ್ಯ ಪೀಠ ಜಾಮೀನು ಮಂಜೂರುಗೊಳಿಸಿದೆ.
2018ರಲ್ಲಿ ಮೋಹನ್ ನಾಯಕ್ ಬಂಧನವಾಗಿತ್ತು:
ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿ ಮೋಹನ್ ನಾಯಕ್ ಅವರನ್ನು 2018ರಲ್ಲಿ ಬಂಧಿಸಲಾಗಿತ್ತು. ಕೊಲೆಯಲ್ಲಿ ಗುಂಡು ಹಾರಿಸಿದ ಆರೋಪಿ ಪರಶುರಾಮ್ ವಾಗ್ಮೋರೆಗೆ ಗನ್ ನೀಡಿದ್ದ ಆರೋಪದಲ್ಲಿ ಮೋಹನ್ ನಾಯಕ್ ಬಂಧನವಾಗಿತ್ತು. ಇದೀಗ ಸುಮಾರು ಐದೂವರೆ ವರ್ಷಗಳ ಬಳಿಕ ಆರೋಪಿಗೆ ಜಾಮೀಜು ಮಂಜೂರಾಗಿದೆ.