ಮರ್ದಾಳ: ಮಿಶ್ರತಳಿ ಹೆಣ್ಣುಕರುಗಳ ಪ್ರದರ್ಶನ-ಜಾನುವಾರು ಆರೋಗ್ಯ ಶಿಬಿರ

0

ಕಡಬ: ಯುವಕ ಯುವತಿಯರು ಹೈನುಗಾರಿಯಲ್ಲಿ ತೊಡಗಿಕೊಂಡರೆ ಅದರಿಂದ ಉತ್ತಮ ಬದುಕು ಕಟ್ಟಿಕೊಳ್ಳಬಹುದು ಎಂದು ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ ಹೇಳಿದರು.


ಅವರು ಡಿ.7ರಂದು ಮರ್ದಾಳದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ದಕ್ಷಿಣ ಕನ್ನಡ ಹಾಲು ಒಕ್ಕೂಟ ಮಂಗಳೂರು, ಹಾಲು ಉತ್ಪಾದಕರ ಸಹಕಾರ ಸಂಘ ಮರ್ದಾಳ, ವಿಜಯ ಗ್ರಾಮೀಣ ಅಭಿವೃದ್ದಿ ಪ್ರತಿಷ್ಠಾನ ಬ್ಯಾಂಕ್ ಆಪ್ ಬರೋಡಾ ಸಂಯೋಜಿತ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಡಬ, ಹಾಲು ಉತ್ಪಾದಕರ ಸಹಕಾರ ಸಂಘ ಕಡ್ಯ ಕೊಣಾಜೆ, ಐತ್ತೂರು ಗ್ರಾಮ ಪಂಚಾಯತ್, ಶ್ರೀ ಗಣೇಶ್ ಮೆಡಿಕಲ್ಸ್ ಕಡಬ ಇವರುಗಳ ಸಂಯುಕ್ತ ಆಶ್ರಯದಲ್ಲಿ ಮಿಶ್ರತಳಿ ಹೆಣ್ಣು ಕರುಗಳ ಪ್ರದರ್ಶನ ಹಾಗೂ ಜಾನುವಾರು ಆರೋಗ್ಯ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನ ದಿನಗಳಲ್ಲಿ ಹೈನುಗಾರಿಕೆ ಉಳಿಯಬೇಕಾದರೆ ವಿದ್ಯಾವಂತ ಯುವಕ, ಯುವತಿಯರು ಹೈನುಗಾರಿಕೆ ಮಾಡಲು ಮುಂದೆ ಬರಬೇಕು, ಹೈನುಗಾರಿಕೆಯಲ್ಲಿ ಆರೋಗ್ಯ ಪೂರ್ಣ ಸಮಾಜ ನಿರ್ಮಾಣ ಸಾಧ್ಯ, ಪ್ರಸ್ತುತ ಹಾಲು ಉತ್ಪಾದನೆ ಕಡಿಮೆಯಾಗಿದೆ ಇದಕ್ಕೆ ಕಾರಣಗಳು ಹಲವಾರು ಇರಬಹುದು, ಆದರೆ ಇದರಿಂದ ವಿಚಲಿತರಾಗಬಾರದು, ಈ ನಿಟ್ಟಿನಲ್ಲಿ ಹಾಲು ಉತ್ಪಾದಕ ಒಕ್ಕೂಟದಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.


ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಉಪಾಧ್ಯಕ್ಷ ಎಸ್.ಬಿ. ಜಯರಾಮ ರೈ ಬಳಜ್ಜ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಹಾಲು ಉತ್ಪಾದನೆ ಕಡಿಮೆಯಾಗಲು ಪ್ರಮುಖವಾಗಿ ಚರ್ಮ ಗಂಟು ರೋಗ ಕಾರಣ ಇರಬಹುದು, ಈ ಬಗ್ಗೆ ಆಡಳಿತ ಮಂಡಳಿಯಲ್ಲಿ ಚರ್ಚೆ ನಡೆಸಿದ್ದೇವೆ, ಮುಂದಿನ ದಿನಗಳಲ್ಲಿ ಹಾಲು ಉತ್ಪಾದನೆ ಹೆಚ್ಚು ಮಾಡುವ ಬಗ್ಗೆ ಯೋಜನೆ ಹಾಕಿಕೊಳ್ಳಲಾಗುವುದು ಎಂದು ಹೇಳಿದ ಅವರು ಹೈನುಗಾರರಿಗೆ ಸಾಲ ಯೋಜನೆಯನ್ನು ರೂಪಿಸಲಾಗುವುದು ಎಂದು ಹೇಳಿದರು.


ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ಧೇಶಕ ನಾರಾಯಣ ಪ್ರಕಾಶ್, ಬ್ಯಾಂಕ್ ಆಪ್ ಬರೋಡಾ ಪ್ರಾಯೋಜಿತ ವಿಜಯ ಗ್ರಾಮೀಣ ಪ್ರತಿಷ್ಠಾನದ ಕಾರ್ಯದರ್ಶಿ ರಾಜೇಂದ್ರ ರೈ ಬೆಳ್ಳಿಪ್ಪಾಡಿ ಮಾತನಾಡಿದರು. ಮರ್ದಾಳ ಗ್ರಾ.ಪಂ. ಅಧ್ಯಕ್ಷೆ ಪ್ರೇಮ ಚಂದ್ರಶೇಖರ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಐತ್ತೂರು ಗ್ರಾ.ಪಂ. ಅಧ್ಯಕ್ಷೆ ವತ್ಸಲಾ, ಕಡಬ ಪ್ರಾ.ಕೃ.ಪ. ಸಹಕಾರ ಸಂಘದ ಅಧ್ಯಕ್ಷ ರಮೇಶ್ ಕಲ್ಪುರೆ, ಕಡ್ಯ ಕೊಣಾಜೆ ಹಾ.ಉ, ಸಹಕಾರ ಸಂಘದ ಅಧ್ಯಕ್ಷ ಶಿವಪ್ಪ, ಸುಳ್ಯ ಪಶು ಆಸ್ಪತ್ರೆಯ ಪಶುವೈದ್ಯಾಧಿಕಾರಿ ಡಾ.ನಿತಿನ್ ಪ್ರಭು, ದ.ಕ. ಹಾಲು ಉತ್ಪಾದಕರ ಒಕ್ಕೂಟದ ಉಪ ವ್ಯವಸ್ಥಾಪಕ ಡಾ. ಸತೀಶ್ ರಾವ್, ಕಡಬ ಪಶು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಅಜಿತ್, ದ.ಕ. ಹಾಲು ಒಕ್ಕೂಟದ ವಿಸ್ತರಣಾ ಅಧಿಕಾರಿ ಆದಿತ್ಯ ಮೊದಲಾದವರು ಉಪಸ್ಥಿತರಿದ್ದರು. ಮರ್ದಾಳ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ತಿರುಮಲೇಶ್ವರ ಗೌಡ ಸ್ವಾಗತಿಸಿ, ಕಾರ್ಯದರ್ಶಿ ರಾಧಾಕೃಷ್ಣ ಗೌಡ ಎಸ್. ವಂದಿಸಿದರು. ಗಣೇಶ್ ಕೈಕುರೆ ಕಾರ್ಯಕ್ರಮ ನಿರೂಪಿಸಿದರು.


ಸನ್ಮಾನ:
ಕರುಗಳ ಪ್ರದರ್ಶನ ಕಾರ್ಯಕ್ರಮಕ್ಕೆ ಸ್ಥಳಾವಕಾಶ ನೀಡಿದ ಮೀನಾಕ್ಷಿ ಬಾಬು ಗೌಡ ಕೈಕುರೆ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.


ಚಾಂಪಿಯನ್ ಪಡೆದ ಕರು
ಕಾರ್ಯಕ್ರಮದಲ್ಲಿ ಸುಮಾರು 125 ಕರುಗಳು ಪ್ರದರ್ಶನಗೊಂಡಿದ್ದವು, ಇದರಲ್ಲಿ ರಮೇಶ್ ಮತ್ತು ವೀಣಾರಮೇಶ್ ಕೊಲ್ಲೆಸಾಗು ಅವರ ಕರು ಸಮಗ್ರ ಚಾಂಪಿಯನ್ ಶಿಪ್ ನ್ನು ಪಡೆದುಕೊಂಡಿದೆ.

LEAVE A REPLY

Please enter your comment!
Please enter your name here