ಸುಳ್ಯ ಮತ್ತು ಕಡಬ ತಾಲೂಕಿನಲ್ಲಿ ಕಾಡಾನೆ ದಾಳಿಯಿಂದ ಜನತೆಗೆ ಸಂಕಷ್ಟ- ಅರಣ್ಯ ಸಚಿವರ ಗಮನ ಸೆಳೆದ ಶಾಸಕಿ ಭಾಗೀರಥಿ ಮುರುಳ್ಯ

0

ಸವಣೂರು : ಸುಳ್ಯ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಸುಳ್ಯ ಮತ್ತು ಕಡಬ ತಾಲ್ಲೂಕಿನಲ್ಲಿ ಹೆಚ್ಚಿನ ಜನರು ಗ್ರಾಮೀಣ ಪ್ರದೇಶದಲ್ಲಿ ನೆಲೆಸಿದ್ದು, ಜೀವನ ನಿರ್ವಹಣೆಗೆ ಕೃಷಿಯನ್ನೇ ಮೂಲ ಕಸುಬನ್ನಾಗಿ ಅವಲಂಬಿಸಿದ್ದು, ಅದರೇ ಇತ್ತೀಚಿನ ದಿನಗಳಲ್ಲಿ ಆನೆಗಳು ಕೃಷಿ ಜಮೀನುಗಳಿಗೆ ನುಗ್ಗಿ ಕೃಷಿಯನ್ನೆಲ್ಲ ನಾಶಪಡಿಸಿ ಆಸ್ತಿ ಹಾನಿ ಹಾಗೂ ಜೀವ ಹಾನಿ ಉಂಟು ಮಾಡುತ್ತಿದ್ದು ಈ ಕುರಿತು ಸರಕಾರದ ಗಮನಕ್ಕೆ ಬಂದಿದೆಯೇ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರನ್ನು ಬೆಳಗಾವಿ ಅಧಿವೇಶನದಲ್ಲಿ ಪ್ರಶ್ನಿಸಿದ್ದಾರೆ.

ಇದಕ್ಕುತ್ತರಿಸಿದ ಸಚಿವ ಈಶ್ವರ ಖಂಡ್ರೆ ಅವರು ,ಸುಳ್ಯ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಸುಳ್ಯ ಮತ್ತು ಕಡಬ ತಾಲ್ಲೂಕಿನಲ್ಲಿ ಆನೆಗಳು ಕೃಷಿ ಜಮೀನುಗಳಿಗೆ ನುಗ್ಗಿ, ಬೆಳೆನಾಶಪಡಿಸಿ ಆಸ್ತಿ ಹಾನಿ ಮಾಡಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ  ವನ್ಯಪ್ರಾಣಿ ದಾಳಿಯಿಂದ ಉಂಟಾಗುವ ಮಾನವ -ಪ್ರಾಣ ಹಾನಿ, ಶಾಶ್ವತ ಅಂಗವಿಕಲತೆ, ಭಾಗಶಃ ಶಾಶ್ವತ ಅಂಗವಿಕಲತೆ, ಗಾಯಗೊಂಡವರಿಗೆ, ಆಸ್ತಿ-ಪಾಸ್ತಿ ನಷ್ಟ ಮತ್ತು ಮಾಸಾಶನ ಪ್ರಕರಣಗಳಲ್ಲಿ ಪರಿಹಾರಧನವನ್ನು ನೀಡಲಾಗುತ್ತಿದೆ.

ಕಡಬ ಮತ್ತು ಸುಳ್ಯ ತಾವಲ್ಲೂಕಿನಲ್ಲಿ ಮಾನವ-ಕಾಡಾನೆ ನಡುವಿನ ಸಂಘರ್ಷ ತಪ್ಪಿಸಲು ಸರ್ಕಾರ ಕೈಗೊಂಡಿರುವ ಮಾರ್ಗೋಪಾಯಗಳು ಹೀಗಿದ್ದು 

1. ಕಾಡಾನೆಗಳ ಹಾವಳಿ ಹೆಚ್ಚಾಗಿರುವ ಪ್ರದೇಶದಲ್ಲಿ ಜನ ಸಂಪರ್ಕ ಸಭೆಯನ್ನು ಕರೆದು ಜನರಲ್ಲಿ ಅರಿವು ಮೂಡಿಸುವುದು.
2. ರೈತರಿಗೆ ಸಬ್ಸಿಡಿ ದರದಲ್ಲಿ ಸೋಲಾರ್ ಬೇಲಿ ನಿರ್ಮಾಣ ಮಾಡಲು ಉತ್ತೇಜನ ನೀಡಲಾಗುತ್ತಿದೆ ಹಾಗೂ ಅರಣ್ಯದ ಅಂಚಿನಲ್ಲಿ ಬರುವ ಖಾಸಗಿ ಜಮೀನುಗಳ ಸುತ್ತಾ ಸರಕಾರದ ವತಿಯಿಂದ ದೊರಕುವ ಶೇ. 50 ಸಬ್ಸಿಡಿಯನ್ನು ಬಳಸಿಕೊಂಡು ಕಳೆದ ಮೂರು ವರ್ಷಗಳಲ್ಲಿ 4.08ಕಿ.ಮೀ. ಸೌರಶಕ್ತಿ ಬೇಲಿಯನ್ನು ನಿರ್ಮಿಸಲಾಗಿದೆ.
3. ಆನೆ ನಿರೋಧಕ ಕಂದಕ ನಿರ್ಮಾಣ, ಸೋಲಾರ್ ತಂತಿಬೇಲಿ ನಿರ್ಮಾಣ, ಟೆಂಟಕಲ್ ಫೆನ್ಸಿಂಗ್, ಹಳ್ಳತೊರೆಗಳು ಬರುವಲ್ಲಿ ವಿಶೇಷ ವಿನ್ಯಾಸದ ಕಾಂಕ್ರಿಟ್ ರಚನೆ ಮಾಡಲಾಗಿರುತ್ತದೆ. ಹಾಗೂ ಕೃಷಿ ಭೂಮಿಗೆ ಬಂದಂತಹ ಕಾಡಾನೆಯನ್ನು ಹಿಮ್ಮೆಟ್ಟಿಸಲು ಅರಣ್ಯ ರಕ್ಷಣಾ ಶಿಬಿರ ಮತ್ತು ವನ್ಯಪ್ರಾಣಿ ಹಿಮ್ಮೆಟ್ಟಿಸುವ ತಂಡಗಳಿಂದ ಕಾಡಿಗೆ ಹಿಮ್ಮೆಟ್ಟಿಸುವ ಕಾರ್ಯ ನಿರ್ವಹಿಸಲಾಗುತ್ತಿದೆ. 
4. ನಾಗರಹೊಳೆ/ಮಡಿಕೇರಿ ವನ್ಯಜೀವಿ ವಿಭಾಗಗಳಿಂದ ನುರಿತ ಆನೆ ಕಾವಡಿಗಳನ್ನು ಮತ್ತು ಪಶು ವೈದ್ಯಾಧಿಕಾರಿಗಳನ್ನು ನಿಯೋಜಿಸಿಕೊಂಡು ನಾಡಿಗೆ ಬಂದ ಕಾಡಾನೆಯನ್ನು ಕಾಡಿಗೆ ಹಿಮ್ಮೆಟ್ಟಿಸಿರುವ ಕಾರ್ಯಕ್ರಮ ನಡೆಸಲಾಗುತ್ತಿದೆ.
5. ಸಾರ್ವಜನಿಕರಲ್ಲಿ ವನ್ಯಪ್ರಾಣಿಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಾಗಾರ ಏರ್ಪಡಿಸಲಾಗುತ್ತಿದೆ ಎಂದು ಸಚಿವರು ಉತ್ತರಿಸಿದರು.

LEAVE A REPLY

Please enter your comment!
Please enter your name here