ಲಿಟ್ಲ್ ಫ್ಲವರ್ ಶಾಲೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಕಬಡ್ಡಿ ಆಟಗಾರ್ತಿಯರಿಗೆ ಅಭಿನಂದನೆ

0

ಪುತ್ತೂರು:ಶಾಲಾ ಶಿಕ್ಷಣ ಇಲಾಖೆಯಿಂದ ನಡೆದ 14ರ ವಯೋಮಾನದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ದರ್ಬೆ ಲಿಟ್ಲ್ ಫ್ಲವರ್ ಶಾಲಾ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿಯಿಂದ ಅಭಿನಂದಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೆಥನಿ ಸಂಸ್ಥೆಯ ಮಂಗಳೂರು ಪ್ರಾಂತ್ಯದ ಮುಖ್ಯಸ್ಥರ ಸಲಹೆಗಾರರಾಗಿರುವ ಭಗಿನಿ. ರೋಶಲ್ ಬಿ ಎಸ್. ರಾಷ್ಟ್ರ ಮಟ್ಟದ ಪ್ರತಿಭೆಗಳನ್ನು ಅಭಿನಂದಿಸಿದರು. ಮುಖ್ಯ ಅತಿಥಿಗಳಾಗಿ ಬೆಥನಿ ಸಂಸ್ಥೆಯ ಮಂಗಳೂರು ಪ್ರಾಂತ್ಯದ ಲೆಕ್ಕ ಪರಿಶೋಧಕಿ ಭಗಿನಿ ಸಿಬಿಲ್ ಬಿ ಎಸ್. ಶಾಲಾ ಸಂಚಾಲಕಿ ಭಗಿನಿ ಪ್ರಶಾಂತಿ ಬಿ ಎಸ್. ಕಾರ್ಯಕ್ರಮದ ಪ್ರಾಯೋಜಕರಾದ ಸುನೀತಾ ದಲ್ಮೆದಾ, ದರ್ಬೆ ಪ್ರಕಾಶ್ ಡೆಂಟಲ್ ಕ್ಲಿನಿಕ್ ನ ದಂತ ವೈದ್ಯರು, ಶಾಲಾ ಹಿರಿಯ ವಿದ್ಯಾರ್ಥಿಯಾಗಿರುವ ಡಾ. ಶ್ರೀಪ್ರಕಾಶ್, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ರಾಮಚಂದ್ರ ಭಟ್, ಸುರಕ್ಷಾ ಸಮಿತಿ ಅಧ್ಯಕ್ಷ ಸತೀಶ್ ಆರ್ ಹಾಗೂ ಮುಖ್ಯ ಶಿಕ್ಷಕಿ ವೆನಿಶಾ ಬಿ .ಎಸ್ ಉಪಸ್ಥಿತರಿದ್ದರು.


ಕಬಡ್ಡಿ ಆಟಗಾರ್ತಿಯರಾದ ಜುವೆನ್ನಾ ಡ್ಯಾಝಲ್ ಕುಟಿನ್ಹಾ, ಸನ್ನಿಧಿ, ಜೆನಿಟಾ ಸಿಂಧು ಪಸನ್ನ, ಫಾತಿಮತ್ ಶೈಮಾ, ಜೆಸ್ಮಿತಾ, ಹಾರ್ದಿಕ, ನಿಶ್ಮಿತಾ ಮತ್ತು ಕಬಡ್ಡಿ ತರಬೇತುದಾರರಾದ ಸಹ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್, ಮಹಮ್ಮದ್ ಹಬೀಬ್, ಸುಚೇತ್ ದುರ್ಗಾ ನಗರ, ಶಿಲ್ಪಾ ಮರಿಯಾ ಡಿಸೋಜ ಹಾಗೂ ಕಬಡ್ಡಿ ಕ್ರೀಡಾ ಪಟುಗಳಿಗೆ ವಸತಿ ಮತ್ತು ಊಟದ ವ್ಯವಸ್ಥೆ ಒದಗಿಸಿದ್ದ ಸಹ ಶಿಕ್ಷಕಿ ವಿಲ್ಮಾ ಫೆರ್ನಾಂಡೀಸ್, ಮಂಗಳೂರು ಪ್ರಾಂತ್ಯದ ಮುಖ್ಯಸ್ಥರ ಸಲಹೆಗಾರರಾಗಿರುವ ಭಗಿನಿ. ರೋಶಲ್ ಬಿ. ಎಸ್ ಹಾಗೂ ಬೆಥನಿ ಸಂಸ್ಥೆಯ ಮಂಗಳೂರು ಪ್ರಾಂತ್ಯದ ಲೆಕ್ಕ ಪರಿಶೋಧಕಿ ಭಗಿನಿ ಸಿಬಿಲ್ ಬಿ ಎಸ್ ರವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ. ಎಸ್ ಸ್ವಾಗತಿಸಿ, ಶಿಕ್ಷಕಿ ಪವಿತ್ರಾ ವಂದಿಸಿ. ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ಕಾರ್ಯಕ್ರಮ ನಿರೂಪಿಸಿದರು

LEAVE A REPLY

Please enter your comment!
Please enter your name here