ಪಾಪೆಮಜಲು ಸರ್ಕಾರಿ ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟ

0

ಅರಿಯಡ್ಕ:ಸರಕಾರಿ ಪ್ರೌಢಶಾಲೆ ಪಾಪೆಮಜಲು ಇಲ್ಲಿ ಡಿ.7 ರಂದು ಶಾಲಾ ವಾರ್ಷಿಕ ಕ್ರೀಡಾಕೂಟವನ್ನು ಮನೋಜ್ ಕುಮಾರ್ ರೈ ಪಾಪೆಮಜಲು ಇವರು ದೀಪ ಬೆಳಗಿಸಿ ಉದ್ಘಾಟಿಸಿದರು. ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಶಿವರಾಮ ಮಣಿಯಾಣಿ ಕುರಿಂಜ ಧ್ವಜಾರೋಹಣಗೈದರು. ಪಾಪೆ ಮಜಲು ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ತೆರೇಸಾ ಸಿಕ್ವೇರಾ ಕ್ರೀಡಾ ಜ್ಯೋತಿ ಬೆಳಗಿಸಿ ಶುಭ ಹಾರೈಸಿದರು.ಶಿಕ್ಷಣ ತಜ್ಞರಾದ ದಶರಥ್ ರೈ ವಿದ್ಯಾರ್ಥಿಗಳಿಂದ ನಡೆದ ಆಕರ್ಷಕ ಪಥ ಸಂಚಲನದ ಗೌರವ ವಂದನೆ ಸ್ವೀಕರಿಸಿದರು.

ಸಭಾಧ್ಯಕ್ಷತೆಯನ್ನು ಶಾಲಾ ಎಸ್‌ಡಿಎಂಸಿ ಕಾರ್ಯಧ್ಯಕ್ಷರಾದ ಇಕ್ಬಾಲ್ ಹುಸೇನ್ ವಹಿಸಿದ್ದರು. ವೇದಿಕೆಯಲ್ಲಿ ಎಸ್ ಡಿ ಎಂ ಸಿ ಸದಸ್ಯರಾದ ಹೊನ್ನಪ್ಪ ನಾಯ್ಕ , ನಾಗೇಶ ನಾಯ್ಕ, ಸೀತಾರಾಮ, ಕೆ ಪ್ರೇಮನಾಥ, ಭಾಗೀರಥಿ, ರೇವತಿ, ಲೀಲಾವತಿ, ಸುಂದರಿ ಉಪಸ್ಥಿತರಿದ್ದರು. ಪುತ್ತೂರು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಂದರ ಗೌಡ ಶುಭ ಹಾರೈಸಿದರು. ಶಾಲಾ ಮುಖ್ಯ ಶಿಕ್ಷಕರಾದ ಮೋನಪ್ಪ ಬಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಪ್ರವೀಣ ರೈ ಕೃತಜ್ಞತೆ ಸಲ್ಲಿಸಿದರು. ಸವಿತಾ ಸಹಶಿಕ್ಷಕಿ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಶಿಕ್ಷಕರಾದ ಪೂರ್ಣಿಮಾ ಶೆಟ್ಟಿ, ಹರಿಪ್ರಸಾದ್, ಶಾಲೆಟ್ ಜೇನ್ ರೆಬೆಲ್ಲೋ, ಹರಿಣಾಕ್ಷಿ ಸಹಕರಿಸಿದರು.


ಸಮಾರೋಪ ಸಮಾರಂಭ……
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಅರಿಯಡ್ಕ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಮೀನಾಕ್ಷಿ ಶುಭ ಹಾರೈಸಿದರು. ಕುಂಬಾರರ ಗುಡಿ ಕೈಗಾರಿಕಾ ಸಂಘದ ನಿರ್ದೇಶಕರಾದ ಶಿವಪ್ಪ ಕುಲಾಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯೆ ಸಾವಿತ್ರಿ ಕುರಿಂಜ, ಜಯಂತಿ ಪಟ್ಟು ಮೂಲೆ, ಚಂದ್ರಶೇಖರ ಮಣಿಯಾಣಿ ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾ ಶಿಕ್ಷಕರಾದ ಕುಸುಮ, ಸ್ವಾತಿ, ಹಿರಿಯ ವಿದ್ಯಾರ್ಥಿಗಳಾದ ಕಾರ್ತಿಕ್, ಹರ್ಷಿತ್, ಜೀವನ್ ಸಹಕರಿಸಿದರು. ಈ ಕ್ರೀಡಾಕೂಟದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮತ್ತು ಪಾಪೆಮಜಲು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಆಟೋಟಗಳನ್ನು ನಡೆಸಿ ಬಹುಮಾನ ನೀಡಲಾಯಿತು. ಚಂದ್ರಶೇಖರ ಬಲ್ಯಾಯ ನಿನಾದ ಮದ್ಲ ಕಾರ್ಯಕ್ರಮದ ಪ್ರಾಯೋಜಕತ್ವ ವಹಿಸಿದ್ದರು.

LEAVE A REPLY

Please enter your comment!
Please enter your name here