ಪುತ್ತಿಲ ಪರಿವಾರದಿಂದ ಮಹಾಲಿಂಗೇಶ್ವರನ ಸನ್ನಿಧಿಯಿಂದ ವಿಟ್ಲ ಪಂಚಲಿಂಗೇಶ್ವರನ ಸನ್ನಿಧಿಗೆ ಪಾದಾಯಾತ್ರೆ

0

ಪುತ್ತೂರು: ಪುತ್ತಿಲ ಪರಿವಾರ ಹಾಗೂ ಸಾರ್ವಜನಿಕ ಶನೈಶ್ಚರ ಪೂಜಾ ಸಮಿತಿ ವಿಟ್ಲ ಇದರ ವತಿಯಿಂದ ಲೋಕ ಕಲ್ಯಾಣಾರ್ಥವಾಗಿ ಡಿ.9ರಂದು ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಸಾರ್ವಜನಿಕ ಶನೈಶ್ಚರ ಪೂಜೆ ಹಾಗೂ ಬೃಹತ್ ಹಿಂದೂ ಚೈತನ್ಯ ಸಮಾವೇಶದ ಅಂಗವಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ತನಕ ನಡೆಯುವ ಪಾದಾಯತ್ರೆಯು ಪ್ರಾರಂಭಗೊಂಡಿತು.
ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಪಾದಾಯಾತ್ರೆಗೆ ತೆಂಗಿನ ಕಾಯಿ ಒಡೆದು ಚಾಲನೆ ನೀಡಲಾಯಿತು. ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ, ಕಾರ್ಯದರ್ಶಿ ಉಮೇಶ್ ಕೋಡಿಬೈಲು, ನಗರದ ಅಧ್ಯಕ್ಷ ಅನಿಲ್ ತೆಂಕಿಲ ತೆಂಗಿನಕಾಯಿ ಒಡೆದು ಚಾಲನೆ ನೀಡಿದರು. ಪುತ್ತಿಲ ಪರಿವಾರದ ಪ್ರಮುಖರಾದ ಸುಬ್ರಹ್ಮಣ್ಯ ಬಲ್ಯಾಯ, ಸುಧೀರ್ ಶೆಟ್ಟಿ ನೇಸರ ಕಂಪ, ಅಶೋಕ್ ಪುತ್ತಿಲ, ಅನಿಲ್ ಕಣ್ಣಾರ್ನೂಜಿ, ಶ್ರಿಕಾಂತ್ ಆಚಾರ್ ಹಿಂದಾರ್, ಪ್ರವೀಣ್ ಶೆಟ್ಟಿ ತಿಂಗಳಾಡಿ, ಸುನಿಲ್ ಬೋರ್ಕರ್ ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು.


ಪಾದಾಯಾತ್ರೆಯು ಮುಖ್ಯರಸ್ತೆ, ಬೊಳುವಾರು, ಕಬಕ ಮಾರ್ಗವಾಗಿ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸಮಾಪನಗೊಳ್ಳಲಿದೆ. ಬಳಿಕ ಸಾರ್ವಜನಿಕ ಶನೈಶ್ಚರ ಪೂಜೆ, ಚೈತನ್ಯ ಸಮಾವೇಶ ನಡೆಯಲಿದೆ.

LEAVE A REPLY

Please enter your comment!
Please enter your name here