ಸವಣೂರು: ಸರಕಾರಿ ಪದವಿ ಪೂರ್ವ ಕಾಲೇಜ್, ಪ್ರೌಢಶಾಲೆಯ ವಾರ್ಷಿಕ ಪ್ರತಿಭಾ ದಿನಾಚರಣೆ

0

ಪುತ್ತೂರು: ಸರಕಾರಿ ಪದವಿ ಪೂರ್ವ ಕಾಲೇಜು ಸವಣೂರು ಹಾಗೂ ಪ್ರೌಢಶಾಲೆಯ ವಾರ್ಷಿಕ ಪ್ರತಿಭಾ ದಿನಾಚರಣೆ ದ.8ರಂದು ಜರಗಿತು.
ಸವಣೂರು ಗ್ರಾ.ಪಂ, ಅಧ್ಯಕ್ಷೆ ಸುಂದರಿರವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾಲೇಜಿನ ಕಟ್ಟಡ ಸಮಿತಿಯ ಅಧ್ಯಕ್ಷ ಪಿ.ಡಿ. ಕೃಷ್ಣಕುಮಾರ್ ರೈ ದೇವಸ್ಯರವರು ಕಾರ್‍ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಹಿರಿಯರಾದ ಪಿ.ಡಿ.ಗಂಗಾಧರ್ ರೈ ದೇವಸ್ಯ, ಅಕ್ರಮ ಸಕ್ರಮ ಸಮಿತಿಯ ಸದಸ್ಯ ರಾಕೇಶ್ ರೈ ಕೆಡಂಜಿ. ಸವಣೂರು ಪದವಿ ಪೂರ್ವ ಕಾಳೇಜ್‌ನ ಕಾರ್‍ಯಧ್ಯಕ್ಷ ಗಿರಿ ಶಂಕರ್ ಸುಲಾಯ ದೇವಸ್ಯ, ನಿಕಟಪೂರ್ವ ಗ್ರಾ.ಪಂ, ಅಧ್ಯಕ್ಷೆ ರಾಜೀವ್ ಶೆಟ್ಟಿ. ಗ್ರಾಮ ಪಂಚಾಯತ್ ಸದಸ್ಯೆ ಇಂದಿರಾ. ಎಸ್ ಡಿ ಎಂ ಸಿ ಅಧ್ಯಕ್ಷ ರಾಧಾಕೃಷ್ಣ, ಸಂಸ್ಥೆಯ ಪ್ರಾಂಶುಪಾಲೆ ಪದ್ಮಾವತಿ ಎನ್. ಪ್ರೌಢಶಾಲಾ ಮುಖ್ಯ ಗುರುಗಳು ರಘು ಬಿ ಆರ್. ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಜಯಶ್ರೀ, ಯುವ ಜನ ಒಕ್ಕೂಟದ ಜಿಲ್ಲಾ ಅಧ್ಯಕ್ಷ ಸುರೇಶ್ ರೈ ಸುಡಿಮುಳ್ಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.. ಸಂಸ್ಥೆಯ ಮುಖ್ಯ ಗುರುಗಳು ರಘು ಬಿ ಆರ್ ಹಾಗೂ ಪ್ರಾಂಶುಪಾಲರು ವಾರ್ಷಿಕ ವರದಿಯನ್ನು ವಾಚಿಸಿದರು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ದತ್ತು ನಿಧಿಯ ಹಣವನ್ನು ವಿತರಿಸಲಾಯಿತು. ವಲಯ ತಾಲೂಕು ಜಿಲ್ಲೆ ರಾಜ್ಯಮಟ್ಟದಲ್ಲಿ ಕ್ರೀಡೆಯಲ್ಲಿ ಹಾಗೂ ಪ್ರತಿಭಾ ಕಾರಂಜಿಯಲ್ಲಿ ವಿಜೇತ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಕ್ರಿಕೆಟ್ ಪಂದ್ಯಾಟದಲ್ಲಿ ವಿಭಾಗ ಮತ್ತು ರಾಜ್ಯಮಟ್ಟದಲ್ಲಿ ಭಾಗವಹಿಸಿ ರಾಜ್ಯದಲ್ಲಿ ದ್ವಿತೀಯ ಸ್ಥಾನವನ್ನು ಪಡೆದ ಕು. ಅಂಕಿತ ಕು.ಪೂರ್ವಿತಾ. ಕು.ಪ್ರನ್ಯ. ಇವರನ್ನು ವಿಶೇಷವಾಗಿ ಗೌರವಿಸಲಾಯಿತು. ಪ್ರೌಢಶಾಲೆಯ ಸಂಗೀತ ಶಿಕ್ಷಕಿ ವಿದುಷಿ ಪವಿತ್ರ ಉಡಪ ಕೆ. ಡಾಕ್ಟರೇಟ್ ಪದವಿಯನ್ನು ಪಡೆದ ಹಿನ್ನೆಲೆಯಲ್ಲಿ ಸಂಸ್ಥೆ ಪರವಾಗಿ ಗೌರವಿಸಿ ಸನ್ಮಾನಿಸಿ ಅಭಿನಂದಿಸಲಾಯಿತು. ವಾರ್ಷಿಕ ಕ್ರೀಡಾಕೂಟದಲ್ಲಿ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರನ್ನು ಇದೇ ಸಂದರ್ಭದಲ್ಲಿ ಗೌರವಿಸಿ ಅಭಿನಂದಿಸಲಾಯಿತು. ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ಶಿಕ್ಷಕರು ಮತ್ತು ಉಪನ್ಯಾಸಕರು ವಿವಿಧ ಕಾರ್ಯಕ್ರಮಗಳನ್ನು ನಿರೂಪಿಸಿದರು.

ಸಭಾ ಕಾರ್ಯಕ್ರಮದ ಬಳಿಕ ಮಧ್ಯಾಹ್ನದ ನಂತರ ಸಂಜೆ ತನಕ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಶಿಕ್ಷಕರುಗಳಾದ ನಯನ. ಪವಿತ್ರ ಉಡಪ. ಕವಿತಾ ಸಿ ಕೆ. ಚರಿತ. ರೇಖಾ. ಸರಸ್ವತಿ. ವಿನಯ. ಉಪನ್ಯಾಸಕರಾದ ರಾಜಶೇಖರ್. ವಿದ್ಯಾದರ. ಶಶಿಕಲಾ. ಅಶ್ವಿನಿ. ಮಮತಾ ಲಾವಣ್ಯ, ಜಯಶ್ರೀ . ಕುಸುಮ . ವಿದ್ಯಾ. ಚಿತ್ರಾ ವಿವಿಧ ಕಾರ್ಯಕ್ರಮಗಳ ಜವಾಬ್ದಾರಿಯನ್ನು ವಹಿಸಿದರು. ಕಾರ್ಯಕ್ರಮದ ಸಂಘಟನೆಗೆ ದೈಹಿಕ ಶಿಕ್ಷಣ ಶಿಕ್ಷಕ ಮಾಮಚ್ಚನ್.ಎಂ. ಸಹಕರಿಸಿದರು. ಪೋಷಕರಿಂದ ಹಿರಿಯ ವಿದ್ಯಾರ್ಥಿಗಳ ಹಾಗೂ ಊರ ಗಣ್ಯ ವ್ಯಕ್ತಿಗಳ ವಿವಿಧ ಸಂಘ ಸಂಸ್ಥೆಗಳ ದಾನಿಗಳ ಸಹಾಯದಿಂದ ಪ್ರತಿಭಾ ದಿನಾಚರಣೆ ಬಹಳ ಅದ್ದೂರಿಯಾಗಿ ನಡೆಯಿತು.

ಪದವಿ ಪೂರ್ವ ಕಾಲೇಜು ವಿಭಾಗದ ಉಪನ್ಯಾಸಕರು ಶ್ರೀಯುತ ಹರಿ ಶಂಕರ್ ಸರ್ವರನ್ನು ಸ್ವಾಗತಿಸಿದರು. ಪ್ರೌಢಶಾಲಾ ವಿಭಾಗದ ರೀನಾ ಎಂ ಡಿ ಸರ್ವರಿಗೂ ವಂದನೆಯನ್ನು ಅರ್ಪಿಸಿದರು. ಶ್ರೀಧರ್ ಕಿಶನ್ ಬಿ ..ವಿ. ರಾಜೀವ್ ಶೆಟ್ಟಿ. ದಿವ್ಯ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here