ನೆಲ್ಯಾಡಿ ಬೆಥನಿ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ

0

ನೆಲ್ಯಾಡಿ: ನೆಲ್ಯಾಡಿ ಬೆಥನಿ ಪ.ಪೂ.ಕಾಲೇಜು ವಿದ್ಯಾರ್ಥಿಗಳ ಹಾಗೂ ಪೋಷಕರ ವಾರ್ಷಿಕ ಕ್ರೀಡಾಕೂಟ ಡಿ.2ರಂದು ಬೆಥನಿ ಕ್ರೀಡಾಂಗಣದಲ್ಲಿ ನಡೆಯಿತು.
ಸಂಸ್ಥೆಯ ಕೋಶಾಧಿಕಾರಿ ರೆ.ಫಾ.ಜೈಸನ್ ಸೈಮನ್‌ರವರು ಅಧ್ಯಕ್ಷತೆ ವಹಿಸಿದ್ದರು. ಅತಿಥಿಯಾಗಿದ್ದ ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ರಾಜೇಶ್ ಕೆ.ವಿ.,ಯವರು ಕ್ರೀಡಾ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಕ್ರೀಡೆಯು ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಕಾರಣವಾಗುತ್ತದೆ. ಕ್ರೀಡಾಂಗಣವು ವಿದ್ಯಾರ್ಥಿಗಳಲ್ಲಿ ಲವ ಲವಿಕೆಯನ್ನು ಉಂಟು ಮಾಡುವ ಸ್ಥಳ. ಕ್ರೀಡೆ ವಿದ್ಯಾರ್ಥಿಗಳಲ್ಲಿ ಶಿಸ್ತು, ಕ್ರೀಡಾಸ್ಪೂರ್ತಿಯನ್ನು ಬೆಳೆಸುತ್ತದೆ ಎಂದರು.
ರೆ.ಫಾ.ಜೋಬ್ ಮ್ಯಾಥ್ಯು, ರೆ.ಫಾ.ಜೇಮ್ಸ್ ತೋಮಸ್, ಸಂಸ್ಥೆಯ ಉಪ ಪ್ರಾಂಶುಪಾಲರಾದ ಜೋಸ್ ಎಂ., ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್, ಜ್ಞಾನೋದಯ ಬೆಥನಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಜಾರ್ಜ್ ಕೆ.ತೋಮಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸೋನಾಮರಿಯ ನಿರೂಪಿಸಿದರು. ದ್ವಿತೀಯ ಪಿಯುಸಿಯ ಬಿನ್ಸಿ ಸ್ವಾಗತಿಸಿ, ಲಿವ್ಯ ಮ್ಯಾಥ್ಯು ವಂದಿಸಿದರು. ಸಂಸ್ಥೆಯ ವಿದ್ಯಾರ್ಥಿಗಳಿಂದ ಪಥಸಂಚಲನ, ಕವಾಯತು ನಡೆಯಿತು. ಬಳಿಕ ಶಿಕ್ಷಕರ ಸಹಕಾರದೊಂದಿಗೆ ಶಾಲೆಯ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿವಿಧ ಸ್ಪರ್ಧೆಗಳು ನಡೆಯಿತು.

LEAVE A REPLY

Please enter your comment!
Please enter your name here