ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ-ಬಿಜೆಪಿ ಬೆಂಬಲಿತರಿಗೆ ಭರ್ಜರಿ ಗೆಲುವು

0

ಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ 12 ಸ್ಥಾನಗಳಿಗೆ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಗೆ ಡಿ.10ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ.

12 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಬೆಂಬಲಿತ ಒಟ್ಟು 24 ಮಂದಿ ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದರು.
ಚುನಾವಣೆ ನಡೆದು ಫಲಿತಾಂಶ ಘೋಷಣೆಯಾದಾಗ 10 ಮಂದಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಮತ್ತು 2 ಮಂದಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಆ ಮೂಲಕ ಕಾಂಗ್ರೆಸ್ ಬೆಂಬಲಿತರ ತೆಕ್ಕೆಯಲ್ಲಿದ್ದ ಆಡಳಿತ ಮಂಡಳಿ ಅಧಿಕಾರ ಇದೀಗ ಬಿಜೆಪಿ ಬೆಂಬಲಿತರ ಪಾಲಾಗಿದೆ.

LEAVE A REPLY

Please enter your comment!
Please enter your name here