ಬೊಳ್ಳಾರು: ಕಾರು, ಬೈಕ್ ಡಿಕ್ಕಿ-ಬೈಕ್ ಸವಾರನಿಗೆ ಗಾಯ

0

ಪುತ್ತೂರು: ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಾಯಗೊಂಡಿರುವ ಘಟನೆ 34ನೇ ನೆಕ್ಕಿಲಾಡಿ ಗ್ರಾಮದ ಬೊಳ್ಳಾರು ಎಂಬಲ್ಲಿ ಡಿ.9ರಂದು ರಾತ್ರಿ ನಡೆದಿದೆ.

ಗಾಯಗೊಂಡ ಬೈಕ್ ಸವಾರ ಅನಿಲ್ ಕುಮಾರ್ ಎಂದು ಗುರುತಿಸಲಾಗಿದೆ. ಇವರು ಚಲಾಯಿಸಿಕೊಂಡು ಹೋಗುತ್ತಿದ್ದ ಬೈಕ್(ಕೆಎ 21, ಡಬ್ಲ್ಯು 1597) ಹಾಗೂ ಸಂತೋಷ್ ಯಾನೆ ಜಾನ್ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಕಾರು(ಕೆಎ 19, ಎಂಬಿ 2512)ನಡುವೆ 34ನೇ ನೆಕ್ಕಿಲಾಡಿ ಗ್ರಾಮದ ಬೊಳ್ಳಾರು ಎಂಬಲ್ಲಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಅನಿಲ್‌ಕುಮಾರ್ ಅವರು ಬೈಕ್ ಸಮೇತ ರಸ್ತೆಗೆ ಬಿದ್ದು ಗಾಯಗೊಂಡಿದ್ದು ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಘಟನೆ ಕುರಿತಂತೆ ಬಿಳಿಯೂರು ನಿವಾಸಿ ರಾಜೀವ ಬಿ ಎಂಬವರು ನೀಡಿದ ದೂರಿನಂತೆ ಪುತ್ತೂರು ಸಂಚಾರ ಠಾಣೆ ಪೊಲೀಸರು ಅ.ಕ್ರ: 165/2023 ಕಲಂ: 279, 337 ಐಪಿಸಿಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here