ಮುಕ್ರಂಪಾಡಿ ಬಾಲಕಿಯರ ಸ.ಪ.ಪೂ ಕಾಲೇಜಿನಲ್ಲಿ ವಾರ್ಷಿಕ ದಿನಾಚರಣೆ, ಪ್ರತಿಭಾ ಪುರಸ್ಕಾರ

0

ಪುತ್ತೂರು: ಮುಕ್ರಂಪಾಡಿ ಬಾಲಕಿಯರ ಸರಕಾರಿ ಪ.ಪೂ ಕಾಲೇಜು ವಾರ್ಷಿಕ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಡಿ.7ರಂದು ನಡೆಯಿತು. ಅಧ್ಯಕ್ಷತೆಯನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷೆಯಾದ ಮಲ್ಲಿಕಾ ಜೆ. ರೈ ವಹಿಸಿ ಮಾತನಾಡಿ, ಸಮಗ್ರ ವ್ಯಕ್ತಿತ್ವ ಬೆಳವಣಿಗೆಗೆ ಅವಶ್ಯಕತೆಗಳಾದ, ಶಿಸ್ತಿನ ಜೀವನ, ಉತ್ತಮ ನಡತೆ ಕುರಿತು ಹಿತವಚನ ನೀಡಿದರು.

ಅತಿಥಿಗಳಾಗಿ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಹರಿಣಾಕ್ಷರವರು ವಿದ್ಯಾರ್ಥಿಗಳಿಗೆ ಆರ್ಶೀವದಿಸಿದರು. ಪುತ್ತೂರು ಪ್ರಗತಿ ಆಸ್ಪತ್ರೆಯ ಡಾ. ಸುಧಾ ಶ್ರೀಪತಿ ರಾವ್‌ರವರು ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಂಸ್ಥೆಯ ಸಾಧನೆಯನ್ನು ಗುರುತಿಸಿ ವಿದ್ಯಾರ್ಥಿನಿಯರು ಉತ್ತಮ ನೈತಿಕ ಮೌಲ್ಯಗಳನ್ನು ರೂಪಿಸಿಕೊಂಡು ಉತ್ತಮ ಶಿಕ್ಷಣದೊಂದಿಗೆ ವೈಯಕ್ತಿವಾಗಿ ಹಾಗೂ ಸಾಮಾಜಿಕವಾಗಿ ಎಲ್ಲರೂ ಗುರುತಿಸಿ ಗೌರವಿಸುವ ಮಟ್ಟಕ್ಕೆ ಬೆಳೆಯಬೇಕೆಂದು ಸ್ಪೂರ್ತಿದಾಯಕವಾಗಿ ಮಾರ್ಗದರ್ಶನ ಮಾಡಿದರು. ಕಾಲೇಜು ಪ್ರಾಂಶುಪಾಲೆ ಪ್ರಮೀಳಾ ಜೆಸ್ಸಿ ಕ್ರಾಸ್ತಾ ಕಾಲೇಜಿನ ವಾರ್ಷಿಕ ಚಟುವಟಿಕೆಗಳ ವರದಿ ವಾಚಿಸಿದರು. ಭೌತಶಾಸ್ತ್ರ ಉಪನ್ಯಾಸಕಿ ನಿರ್ಮಲ , ಗಣಿತ ಶಾಸ್ತ್ರ ಉಪನ್ಯಾಸಕಿ ಜಯಲಕ್ಷ್ಮೀ ಹಾಗು ಇತಿಹಾಸ ಉಪನ್ಯಾಸಕ ದಾಮೋದರ ಬಹುಮಾನ ವಿತರಣಾ ಕಾರ‍್ಯಕ್ರಮ ನೆರವೇರಿಸಿದರು, ರಾಜ್ಯಶಾಸ್ತ್ರ ಉಪನ್ಯಾಸಕಿ ಚಿತ್ರಲೇಖಾ ಸ್ವಾಗತಿಸಿ, ಕನ್ನಡ ಉಪನ್ಯಾಸಕ ಭೋಜರಾಜ ವಂದಿಸಿದರು. ಸಮಾಜಶಾಸ್ತ್ರ ಉಪನ್ಯಾಸಕ ಅಶೋಕ ಪಿ ಹಾಗು ಅರ್ಥಶಾಸ್ತ್ರ ಉಪನ್ಯಾಸಕಿ ಶೋಭಾ ಕಾರ್ಯಕ್ರಮ ನಿರೂಪಿಸಿದರು. ಕು. ಭೂಮಿಕಾ ಹಾಗು ಸಂಗಡಿಗರು ಪ್ರಾರ್ಥಿಸಿದರು. ವಿದ್ಯಾರ್ಥಿನಿ ನಾಯಕಿ ಕು. ಫಾತಿಮತ್ ಅಸ್ಮಿಲಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಭಾ ಕಾರ‍್ಯಕ್ರಮದ ನಂತರ ವಿದ್ಯಾರ್ಥಿನಿಯರಿಂದ ವಿವಿಧ ಸಾಂಸ್ಕ್ರತಿಕ ಕಾರ್ಯಕ್ರಮಗಳು ಜರಗಿದವು.

LEAVE A REPLY

Please enter your comment!
Please enter your name here