ಸುಳ್ಯಪದವು ಸರ್ವೋದಯ ವಿದ್ಯಾಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ

0

ಬಡಗನ್ನೂರುಃ ಸವೋದಯ ವಿದ್ಯಾಸಂಸ್ಥೆಗಳ  ವಾರ್ಷಿಕ ಕ್ರೀಡಾಕೂಟವು ಡಿ.9 ಮತ್ತು 10 ರಂದು ಸರ್ವೋದಯ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಿತು.ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಪ್ರಕಾಶ್ ಮರದಮೂಲೆ, ಕ್ರೀಡಾ ಧ್ವಜಾರೋಹಣ ನೆರವೇರಿಸಿದರು.

ಕಾರ್ಯಕ್ರಮವನ್ನು ನೆಟ್ಟಣಿಗೆ  ಮೂಡ್ನೂರು ಸರಕಾರಿ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ದೇವಿಪ್ರಸಾದ್ ಶೆಟ್ಟಿ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟನೆ ಮಾಡಿ ಶುಭ ಹಾರೈಸಿದರು.ವೇದಿಕೆಯಲ್ಲಿ ಬಡಗನ್ನೂರು ಗ್ರಾ.ಪಂ ಮಾಜಿ ಉಪಾಧ್ಯಕ್ಷ ಗಂಗಾಧರ ರೈ ಎಂ. ಜಿ,ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರಾಮಚಂದ್ರಪ್ಪ ,ನಿವೃತ್ತ  ಗುಮಾಸ್ತ ವಿಷ್ಣು ಭಟ್  ಉಪಸ್ಥಿತರಿದ್ದರು.ಸಭೆಯು ಶಾಲಾ ಮುಖ್ಯ ಶಿಕ್ಷಕ ಸತ್ಯಶಂಕರ ಚಭಟ್ ಪಿ  ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸುಳ್ಯಪದವು ಶ್ರೀ ಅಯ್ಯಪ್ಪ ಭಜನಾ ಮಂದಿರದಿಂದ ಕ್ರೀಡಾ ಜ್ಯೋತಿ ತಂದು ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಮಕ್ಕಳ ಪೋಷಕರು ಮತ್ತು ಮಕ್ಕಳ ಉಪಸ್ಥಿತರಿದ್ದರು.ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸುಖೇಶ್ ರೈ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here