ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಕ್ಯಾಲೆಂಡರ್ ಬಿಡುಗಡೆ

0

ಕಡಬ: ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 2024ರ ಕ್ಯಾಲೆಂಡರನ್ನು ಡಿ.9ರಂದು ಸಂಘದ ಪ್ರಧಾನ ಕಚೇರಿಯಲ್ಲಿ ನಡೆದ ಸಂಘದ ಆಡಳಿತ ಮಂಡಳಿಯ ಮಾಸಿಕ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು.


ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿದ ಸಂಘದ ಅಧ್ಯಕ್ಷ ಮುತ್ತಪ್ಪ ಪೂಜಾರಿ ನೈಯ್ಯಲ್ಗರವರು, ಸಂಘವು ನೀಡುವ ವಿವಿಧ ಸಾಲಗಳು ಹಾಗೂ ಠೇವಣಿಗಳ ಮಾಹಿತಿಯನ್ನು ಒಳಗೊಂಡಿರುವ ಈ ಕ್ಯಾಲೆಂಡರನ್ನು ಸಂಘದ ಕಾರ್ಯಕ್ಷೇತ್ರದ 16 ಗ್ರಾಮದ ಗ್ರಾಹಕರಿಗೆ ಪ್ರತಿವರ್ಷದಂತೆ ಈ ವರ್ಷವೂ ಉಚಿತವಾಗಿ ನೀಡುವುದಾಗಿ ತಿಳಿಸಿದರು.
ಸಂಘದ ಉಪಾಧ್ಯಕ್ಷ ವಸಂತ ಪೂಜಾರಿ ಬದಿಬಾಗಿಲು, ನಿರ್ದೇಶಕರಾದ ಜಯಕರ ಪೂಜಾರಿ ಕಲ್ಲೇರಿ, ಸಂತೋಷ್‌ಕುಮಾರ್ ಮತ್ರಾಡಿ, ಜಿನ್ನಪ್ಪ ಸಾಲಿಯಾನ್ ಕಡಬ, ಸೇಸಪ್ಪ ಪೂಜಾರಿ, ಜಯಂತ ಪೂಜಾರಿ ನೆಕ್ಕಿಲಾಡಿ, ಜಯಪ್ರಕಾಶ್ ದೋಳ, ಗಂಗಾರತ್ನ ವಸಂತ್ ಅಗತ್ತಾಡಿ, ಮಂಜುಳ ಕಲ್ಲೇರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಿಂಗಪ್ಪ ಪೂಜಾರಿ ನೈಯ್ಯಲ್ಗ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೋಗೀಶ್ ಕುಮಾರ್ ಅಗತ್ತಾಡಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here