ಪುತ್ತೂರು: ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್ )ಧಾರವಾಡ, ಸಂಜೀವಿನಿ-ಕೆಎಸ್ಆರ್ಎಲ್ಪಿ ಎಸ್, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ತಾಲೂಕು ಪಂಚಾಯತ್ ಪುತ್ತೂರು ಹಾಗೂ ಆರ್ಯಾಪು ಗ್ರಾಮಪಂಚಾಯತ್ ಇವುಗಳ ಸಂಯೋಜನೆಯಲ್ಲಿ ಸಂಜೀವಿನಿ ಸ್ವ ಸಹಾಯ ಗುಂಪುಗಳ ಸದಸ್ಯರಿಗೆ ಆಯೋಜಿಸಿದ 6 ದಿನಗಳ ಉದ್ಯಮ ಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮದ ಉದ್ಘಾಟನೆಯು ಆರ್ಯಾಪು ಗ್ರಾಮಪಂಚಾಯತ್ನಲ್ಲಿ ಜರಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಆರ್ಯಾಪು ಗ್ರಾ.ಪಂ.ಅಧ್ಯಕ್ಷೆ ಗೀತಾ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಅತಿಥಿಯಾಗಿದ್ದ ದ.ಕ. ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕೆ.ಇ. ಜಯರಾಮ್ರವರು ಗ್ರಾಮೀಣ ಮಹಿಳೆಯರು ಸ್ವ ಉದ್ಯೋಗ ನಡೆಸಿ ಸ್ವಾವಲಂಬಿಗಳಾಗಿ ಜೀವನ ನಡೆಸಲು ಉದ್ಯಮ ಶೀಲತಾ ತರಬೇತಿಯ ಅಗತ್ಯತೆ ಮತ್ತು ಸದುಪಯೋಗದ ಬಗ್ಗೆ ಮಾರ್ಗದರ್ಶನ ನೀಡಿದರು. ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಸತ್ಯಲತಾ, ವಿಜಯಲಕ್ಷ್ಮಿ ಸಿಡಾಕ್ ಮಂಗಳೂರು, ಈಶ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟದ ಅಧ್ಯಕ್ಷೆ ಮೀನಾಕ್ಷಿ, ಸರೋವರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಅಧ್ಯಕ್ಷೆ ಭಾರತಿ ಶುಭ ಹಾರೈಸಿದರು. ತಾಲೂಕು ಅಭಿಯಾನ ಘಟಕದ ಸಿಬ್ಬಂದಿಗಳು, ಸಿಡಾಕ್ ಸಂಸ್ಥೆಯ ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮ ಪಂಚಾಯತಿನ ಸಿಬ್ಬಂದಿಗಳು ಉಪಸ್ಥಿತರಿದ್ದರು.