ರಾಮಕುಂಜ: ಸುಳ್ಯ ತಾಲೂಕಿನ ಗುತ್ತಿಗಾರು ವೀರಾಂಜನೇಯ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ನಡೆದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟದ ಬಾಲಕರ ವಿಭಾಗದಲ್ಲಿ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲಾ ಬಾಲಕರ ತಂಡವು ಪ್ರಥಮ ಸ್ಥಾನ ಹಾಗೂ ಬಾಲಕಿಯರ ವಿಭಾಗದಲ್ಲಿ ಪ್ರೌಢಶಾಲೆಯ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ಬಾಲಕರ ವಿಭಾಗದಲ್ಲಿ ತಂಡದ ನಾಯಕ ಕಾರ್ತಿಕ್ ಬೆಸ್ಟ್ ರೈಡರ್ ಹಾಗೂ ಶ್ರೇಯಸ್ ಬೆಸ್ಟ್ ಕ್ಯಾಚರ್ ಪ್ರಶಸ್ತಿಯನ್ನು ಪಡೆದುಕೊಂಡರು. ಬಾಲಕಿಯರ ವಿಭಾಗದಲ್ಲಿ ಊರ್ಮಿಳ ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿ ಪಡೆದುಕೊಂಡಿದ್ದಾರೆ. ತಂಡಕ್ಕೆ ಮಾಧವ ಬಿ.ಕೆ, ಜಸ್ವಂತ್ ಹಾಗೂ ಮಂಜುನಾಥ್‌ರವರು ತರಬೇತಿ ನೀಡಿದ್ದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲ ರೈ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು. ಶಾಲಾ ಮುಖ್ಯಗುರು ಸತೀಶ್ ಭಟ್, ಶಾಲಾ ಶಿಕ್ಷಕ ವೃಂದ, ಆಡಳಿತ ಮಂಡಳಿಯವರು ಹಾಗೂ ಪೋಷಕರು ಸಹಕರಿಸಿದ್ದರು.