





ಉಪ್ಪಿನಂಗಡಿ : ಕುಂದಾಪುರದ ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಆಶ್ರಯದಲ್ಲಿ ನಡೆದ ಮಂಗಳೂರು ವಿ.ವಿ.ಅಂತರ್ ಕಾಲೇಜು ಚೆಸ್ ಪಂದ್ಯಾವಳಿಯಲ್ಲಿ ಉಪ್ಪಿನಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಅನುಷಾ ಅವರು ಬೋರ್ಡ್ ಟಾಪರ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇವರು ಒಟ್ಟು ಆರು ಪಂದ್ಯಗಳಲ್ಲಿ ಆರನ್ನು ಗೆಲ್ಲುವುದರ ಮೂಲಕ 6 ನೇ ಬೋರ್ಡ್‌ನ ಟಾಪರ್ ಪ್ರಶಸ್ತಿಯನ್ನು ಗಳಿಸಿಕೊಂಡಿದ್ದಾರೆ. ಇವರ ಸಾಧನೆಗೆ ಕಾಲೇಜಿನ ಪ್ರಾಂಶುಪಾಲ ಸುಬ್ಬಪ್ಪ ಕೈಕಂಬ ಹಾಗೂ ಉಪನ್ಯಾಸಕರು ಅಭಿನಂದನೆ ವ್ಯಕ್ತಪಡಿಸಿದ್ದಾರೆ.











