ಸೈಂಟ್ ವಿಕ್ಟರ್ ಆ.ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ

0

ಪುತ್ತೂರು: ಸೈಂಟ್ ವಿಕ್ಟರ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವು ಡಿ.12 ರಂದು ಮಾಯಿ ದೆ ದೇವುಸ್ ಇಗರ್ಜಿಯ ವಠಾರದಲ್ಲಿ ನಡೆಯಿತು.

ಹಿರಿಯ ವಿದ್ಯಾರ್ಥಿ ವಿಶ್ವಾಸ್ ಶೆಣೈಯವರು ಮುಖ್ಯ ಅತಿಥಿಯಾಗಿದ್ದರು. ಶಾಲೆಯಲ್ಲಿ ತಾನು ಕಲಿತ ಅನುಭವಗಳನ್ನು ವಿವರಿಸಿ ನಾನು ಈ ಶಾಲೆಯಲ್ಲಿ ವಿದ್ಯಾಭ್ಯಾಸ ಪಡೆದ ಕಾರಣ ನನ್ನ ಜೀವನದಲ್ಲಿ ಇಷ್ಟು ಎತ್ತರಕ್ಕೆ ಬೆಳೆಯಲು ಸಹಕಾರಿಯಾಯಿತು ಎಂದರು.


ಶಾಲಾ ಸಂಚಾರಕ ಅತೀ ವಂದನೀಯ ಲಾರೆನ್ಸ್ ಮಸ್ಕರೇನ್ಹಸ್ ಅಧ್ಯಕ್ಷ ಸ್ಥಾನ ವಹಿಸಿ ಎಲ್ಲಾ ವಿಧ್ಯಾರ್ಥಿಗಳಿಗೆ ಉತ್ತಮ ಸೌಲಭ್ಯಗಳು ಈ ಸಂಸ್ಥೆಯಲ್ಲಿ ದೊರೆಯುತ್ತಿದ್ದು, ಇದರ ಸದುಪಯೋಗವನ್ನು ಪಡೆದು ಜೀವನದಲ್ಲಿ ಯಶಸ್ವಿಯಾಗಲೆಂದು ಶುಭ ಹಾರೈಸಿದರು. ವೇದಿಕೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ಮಹೇಶಚಂದ್ರ ಸಾಲಿಯಾನ್, ಮುಖ್ಯ ಗುರು ಹ್ಯಾರಿ ಡಿ ಸೋಜ, ಶಾಲಾ ನಾಯಕ ಮಹಮ್ಮದ್ ತಸ್ವೀನ್ ಹಾಗೂ ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಜೆರಾಲ್ಡ್ ಡಿ ಕೋಸ್ಟ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here