ಪುತ್ತೂರು: ಬೆಥನಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಪ್ರಯುಕ್ತ ಆಯೋಜಿಸಲ್ಪಟ್ಟ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಸಮಾರಂಭ ಶಾಲಾ ಸಭಾಭವನದಲ್ಲಿ ಜರುಗಿತು.
ಮುಖ್ಯ ಅತಿಥಿ ಪುತ್ತೂರು ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ನಿವೃತ್ತ ಸೂಪರ್‌ವೈಸರ್ ನಿರಂಜನ್ ಮಾತನಾಡಿ ಸಂಸ್ಥೆ ಹಾಗೂ ವಿದ್ಯೆಯು ವಿದ್ಯಾರ್ಥಿಗಳ ಭವಿಷ್ಯತ್ತಿನಲ್ಲಿ ಬಹಳ ಪ್ರಮುಖ ಪಾತ್ರ ವಹಿಸುತ್ತದೆ. ಉತ್ತಮ ತಳಹದಿಯ ವಿದ್ಯಾಭ್ಯಾಸದಿಂದ ಅವರ ಜೀವನದ ಭವಿಷ್ಯ ನಿರ್ಧರಿಸಲ್ಪಡುತ್ತದೆ. ಇದರಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಪಾತ್ರ ವಹಿಸುತ್ತದೆ ಎಂದರು.
ಪುತ್ತೂರು ಸಂತ ಫಿಲೋಮಿನ ಕಾಲೇಜಿನ ಪ್ರೊಫೇಸರ್ ಡಾ. ಎಡ್ವಿನ್ ಸಂತಾನ್ ಡಿʼಸೋಜ ಹಣ ಹಾಗೂ ಶಿಕ್ಷಣದ ಮೌಲ್ಯಗಳನ್ನು ತಿಳಿಸಿದರು. ಅಧ್ಯಕ್ಷ ಸ್ಥಾನವನ್ನು ವಹಿಸಿದ ಭಗಿನಿ ಪ್ರಶಾಂತಿ ಬಿ.ಎಸ್ ಶಾಲಾ ವಾರ್ಷಿಕೋತ್ಸವಕ್ಕೆ ಶುಭಹಾರೈಸಿದರು. ಬೆಥನಿ ಶಾಲೆಯ ಮಕ್ಕಳ ಸುರಕ್ಷಾ ಸಮಿತಿಯ ಅಧ್ಯಕ್ಷೆ ಆಶಾ ನಾಯಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿ ಚಂದ್ರಾವತಿ ಸ್ವಾಗತಿಸಿ, ಶಿಕ್ಷಕಿ ಹರಿತಾ ವಂದಿಸಿದರು. ವಿದ್ಯಾರ್ಥಿನಿಯರಾದ ಶಮ್ನಾ ಹಾಗೂ ನಿಸ್ಬಾ ಕಾರ್ಯಕ್ರಮ ನಿರೂಪಿಸಿದರು.