ಪುತ್ತೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಗ್ರಾಮ ಪಂಚಾಯತ್ನ 2022-23ನೇ ಸಾಲಿನ ದ್ವಿತೀಯ ಹಾಗೂ 2023-24ನೇ ಸಾಲಿನ ಪ್ರಥಮ ಹಂತದ ಮತ್ತು 2022-23ನೇ ಸಾಲಿನ 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆ ದ.15ರಂದು ಬೆಳಿಗ್ಗೆ 9.30ಕ್ಕೆ ಗ್ರಾ.ಪಂ ಸಭಾಂಗಣದಲ್ಲಿ ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಜರಗಲಿದೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಗ್ರಾ.ಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಉಪಾಧ್ಯಕ್ಷ ಅಶ್ರಫ್ ಉಜಿರೋಡಿ, ಪ್ರಭಾರ ಅಭಿವೃದ್ಧಿ ಅಧಿಕಾರಿ ನಮಿತಾ ಎ.ಕೆ, ಕಾರ್ಯದರ್ಶಿ ಜಯಂತಿ ಹಾಗೂ ಸರ್ವ ಸದಸ್ಯರುಗಳು ಮತ್ತು ಸಿಬ್ಬಂದಿ ವರ್ಗದ ಪ್ರಕಟಣೆ ತಿಳಿಸಿದೆ.