ಪುತ್ತೂರು: ವೈದ್ಯಕೀಯ ತಜ್ಞ ಡಾ|ನಝೀರ್ ಅಹಮ್ಮದ್ ಡಯಾಬೆಟ್ಸ್ ಸೆಂಟರ್, ರೋಟರಿ ಕ್ಲಬ್ ಪುತ್ತೂರು, ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವುಗಳ ಸಹಯೋಗದಲ್ಲಿ ಮಾಸಿಕ ಥೈರಾಯಿಡ್ ಗ್ರಂಥಿಯ ತಪಾಸಣಾ ಶಿಬಿರ, ಉಚಿತ ಮಧುಮೇಹ(GRBS), HBA1C ಮತ್ತು ನ್ಯೂರೋಪತಿ ತಪಾಸಣೆಯು ಡಿ.14 ರಂದು ಕಲ್ಲಾರೆ ಕೃಷ್ಣಾ ಆರ್ಕೆಡ್‌ನಲ್ಲಿರುವ ಡಾ|ನಝೀರ್ ಅಹಮ್ಮದ್‌ರವರ ಕ್ಲಿನಿಕ್‌ನಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ನಡೆಯಲಿದೆ.
ಅತಿಯಾದ ದಣಿವು, ಸುಸ್ತು, ನಿತ್ರಾಣ, ಮಲಬದ್ಧತೆ ಅಥವಾ ಅತಿಸಾರ, ಶೀತಕ್ಕೆ ಅಥವಾ ತಾಪಕ್ಕೆ ಅಸಹಿಷ್ಣುತೆ, ಕೂದಲು ಉದುರುವಿಕೆ, ನೆನಪಿನ ಶಕ್ತಿ ಕುಂದುವುದು, ಏಕಾಗ್ರತೆ ಕಷ್ಟವಾಗುವುದು, ತೂಕ ಹೆಚ್ಚಾಗುವುದು ಅಥವಾ ಕಡಿಮೆ ಆಗುವುದು, ಹೆಂಗಸರಿಗೆ ಅತಿಯಾದ ಮಾಸಿಕ ಸ್ರಾವ ಅಥವಾ ನಿಯಮ ತಪ್ಪಿದ ಮಾಸಿಕ ಸ್ರಾವ, ಮೃದುವಾದ ಕರ್ಕಶ ಸ್ವರ, ಗಂಟಲಿನಲ್ಲಿ ಊದುಕೊಳ್ಳುವಿಕೆ, ಅಧಿಕ ಎದೆ ಬಡಿತ ಅಥವಾ ರಕ್ತದೊತ್ತಡವುಳ್ಳವರು ಶಿಬಿರದಲ್ಲಿ ಪಾಲ್ಗೊಳ್ಳಬಹುದು ಎಂದು ಡಾ.ನಝೀರ್ ಅಹಮದ್ ಡಯಾಬೆಟ್ಸ್ ಸೆಂಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.