ವಿದ್ಯಾಭಾರತಿ ರಾಷ್ಟ್ರಮಟ್ಟದ ಜ್ಞಾನ ವಿಜ್ಞಾನ ಮೇಳ-ವಿವೇಕಾನಂದ ಸೆಂಟ್ರಲ್ ಸ್ಕೂಲ್ ವಿದ್ಯಾರ್ಥಿನಿ ಆಪ್ತ ಚಂದ್ರಮತಿ ದ್ವಿತೀಯ

0

ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಸಂಬಂಧಿತ ವಿದ್ಯಾಭಾರತಿ ಕರ್ನಾಟಕ ಇದರ ವತಿಯಿಂದ ಡಿ. 8 ರಿಂದ 10ರ ವರೆಗೆ ಮಧುರೈಯ ಶ್ರೀಜಿ ಬಾಬಾ ಸರಸ್ವತಿ ವಿದ್ಯಾಮಂದಿರದಲ್ಲಿ ನಡೆದ ರಾಷ್ಟ್ರಮಟ್ಟದ ಗಣಿತ- ವಿಜ್ಞಾನ ಮೇಳ ಮತ್ತು ಸಂಸ್ಕೃತಿ ಮಹೋತ್ಸವ- 2023; ಕಥಾಕಥನ ಸ್ಪರ್ಧೆಯಲ್ಲಿ ನೆಹರು ನಗರದ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ ವಿದ್ಯಾರ್ಥಿನಿ ಆಪ್ತ ಚಂದ್ರಮತಿ ಮುಳಿಯ ಬಾಲವರ್ಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಪುತ್ತೂರಿನ ಖ್ಯಾತ ಸ್ವರ್ಣೋದ್ಯಮಿ ಕೇಶವ ಪ್ರಸಾದ ಮುಳಿಯ ಹಾಗೂ ಕೃಷ್ಣವೇಣಿ ಮುಳಿಯ ದಂಪತಿ ಪುತ್ರಿ.

ಶಾಲಾ ಶಿಕ್ಷಕಿ ಜಯಶ್ರೀ ಆರ್ ಭಟ್ ಮಾರ್ಗದರ್ಶನದಲ್ಲಿ, ರಾಜ್ಯಮಟ್ಟ ಮತ್ತು ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಪಾಲ್ಗೊಂಡು, ಈ ಉನ್ನತ ಸಾಧನೆಯನ್ನು ಮಾಡಿರುತ್ತಾರೆ.

LEAVE A REPLY

Please enter your comment!
Please enter your name here