ನೆಲ್ಯಾಡಿ: ಶ್ರೀ ಷಣ್ಮುಖ ಭಜನಾ ಮಂಡಳಿ ಪೆರ್ಲ-ಆಲಂತಾಯ ಇದರ 2ನೇ ವರ್ಷದ ಮನೆ ಮನೆಗೆ ಭಜಕ ನಡಿಗೆ ಕಾರ್ಯಕ್ರಮದ ಮಂಗಳೋತ್ಸವ, ಪ್ರಥಮ ವಾರ್ಷಿಕೋತ್ಸವ ಮತ್ತು ಗ್ರಾಮೀಣ ಕ್ರೀಡೋತ್ಸವ ಡಿ.17ರಂದು ಕಾಂಚನ ಪೆರ್ಲ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ನಡೆಯಲಿದೆ.
ಡಿ.17ರಂದು ಬೆಳಿಗ್ಗೆ 8.30ರಿಂದ ಗ್ರಾಮೀಣ ಕ್ರೀಡಾಕೂಟ ನಡೆಯಲಿದೆ. ಶಾಂತಿನಗರ ಶಾಲೆ ಮುಖ್ಯಗುರು ಪ್ರದೀಪ್ ಬಾಕಿಲ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಸಂಜೆ 6 ರಿಂದ ಮನೆ ಮನೆ ಭಜಕ ನಡಿಗೆ ಭಜನಾ ಮಂಗಳೋತ್ಸವ ಆಹ್ವಾನಿತ ಭಜನಾ ಮಂಡಳಿಗಳ ಸಹಯೋಗದಲ್ಲಿ ನಡೆಯಲಿದೆ. ರಾತ್ರಿ 7ಕ್ಕೆ ಶ್ರೀ ಷಣ್ಮುಖ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಧನ್ಯ ಕುಮಾರ್ ರೈ ಬಿಳಿಯೂರುಗುತ್ತು ಅವರ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಮಂಗಳೂರು ಕುದ್ರೋಳಿ ನಾರಾಯಣಗುರು ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ ಅವರು ‘ಭಕ್ತಿತ್ವ-ವ್ಯಕ್ತಿತ್ವ’ ಕುರಿತು ಉಪನ್ಯಾಸ ನೀಡಲಿದ್ದಾರೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ನಿವೃತ್ತ ಸೇನಾಧಿಕಾರಿ ಕ್ಯಾ| ಬ್ರಿಜೇಶ್ ಚೌಟ, ಗೋಳಿತ್ತೊಟ್ಟು ಗ್ರಾ.ಪಂ.ಅಧ್ಯಕ್ಷೆ ಸವಿತಾ ಗೌಡ, ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಉಪನ್ಯಾಸಕ ಅಜಿತ್ಕುಮಾರ್ ಪಾಲೇರಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪೆರ್ಲ ಷಣ್ಮುಖ ಭಜನಾ ಮಂಡಳಿ ಮಾಜಿ ಅಧ್ಯಕ್ಷ ವೆಂಕಪ್ಪ ಗೌಡ ಪೆರ್ಲ, ಶ್ರೀ ಕ್ಷೇ.ಧ.ಗ್ರಾ.ಯೋ. ಗೋಳಿತ್ತೊಟ್ಟು ವಲಯ ಒಕ್ಕೂಟದ ವಲಯಾಧ್ಯಕ್ಷ ಬಾಲಕೃಷ್ಣ ಅಲೆಕ್ಕಿ, ಜನಜಾಗೃತಿ ವೇದಿಕೆ ಗೋಳಿತ್ತೊಟ್ಟು ವಲಯ ಅಧ್ಯಕ್ಷ ನೋಣಯ್ಯ ಪೂಜಾರಿ ಅಂಬರ್ಜೆ, ಶಿವಾರು ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ಅಧ್ಯಕ್ಷ ಮನೋಹರ ಗೌಡ ಕೊಳಂಜಿರೋಡಿ, ಶ್ರೀ ಕ್ಷೇತ್ರ ಪೆರ್ಲ ಇಲ್ಲಿನ ಅರ್ಚಕರಾದ ಶ್ರೀನಿವಾಸ ಬಡೆಕಿಲ್ಲಾಯ, ಕೊರಗಪ್ಪ ಮುಗೇರ ಚಂದ್ರಕಟ್ಟ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ರಾತ್ರಿ 8.30ಕ್ಕೆ ಪ್ರಸಾದ ವಿತರಣೆಯಾಗಿ ಅನ್ನಸಂತರ್ಪಣೆ ನಡೆಯಲಿದೆ ಎಂದು ಆಲಂತಾಯ ಪೆರ್ಲ ಶ್ರೀ ಷಣ್ಮುಖ ಭಜನಾ ಮಂಡಳಿ ಅಧ್ಯಕ್ಷ ರಮೇಶ್ ಗೌಡ ಪೆರ್ಲ ತಿಳಿಸಿದ್ದಾರೆ.