- *ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ ಪ್ರಾರ್ಥನೆ
- *ಅಭ್ಯರ್ಥಿಗಳಿಗೆ ಮಲ್ಲಿಗೆಯ ಹಾರ ಹಾಕಿದ ಡಾ.ಸುರೇಶ್ ಪುತ್ತೂರಾಯ
- *ಬಿಜೆಪಿ ಮುಖಂಡರು, ಕಾರ್ಯಕರ್ತರೊಂದಿಗೆ ಕಾಲ್ನಡಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳು
ಪುತ್ತೂರು: ನಗರಸಭೆ ಉಪಚುನಾವಣೆಗೆ ಸಂಬಂಧಿಸಿ ಬಿಜೆಪಿಯಿಂದ ವಾರ್ಡ್ 1ರ ಅಭ್ಯರ್ಥಿ ಸುನಿತಾ ಮತ್ತು ವಾರ್ಡ್ 11ರ ಅಭ್ಯರ್ಥಿ ರಮೇಶ್ ರೈ ಅವರು ಡಿ.15ರಂದು ಬಿಜೆಪಿ ಪ್ರಮುಖ ನಾಯಕರು, ಕಾರ್ಯಕರ್ತರೊಂದಿಗೆ ನಗರಸಭೆಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಬಳಿಕ ಕಾಲ್ನಡಿಗೆ ಮೂಲಕ ನಗರಸಭೆಗೆ ತೆರಳಿ ಅಲ್ಲಿ ನಾಮಪತ್ರ ಸಲ್ಲಿಸಿದರು.
ಈ ನಡುವೆ ಮಹಾಲಿಂಗೇಶ್ವರ ದೇವಳದ ಬಳಿ ಆಗಮಿಸಿದ ಡಾ. ಸುರೇಶ್ ಪುತ್ತೂರಾಯ ಅವರು ಅಭ್ಯರ್ಥಿಗಳಿಬ್ಬರಿಗೆ ಮಲ್ಲಿಗೆ ಹಾರವನ್ನು ಹಾಕಿದರು. ಬಲಿಕ ಕಾಲ್ನಡಿಗೆಯ ಮೂಲಕ ನಗರಸಭೆಗೆ ತೆರಳಿ ನಾಮತ್ರ ಸಲ್ಲಿಸಿದರು
ಬಿಜೆಪಿ ಜಿಲ್ಲಾ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಹಿರಿಯರಾದ ಎಸ್.ಅಪ್ಪಯ್ಯ ಮಣಿಯಾಣಿ, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಯುವರಾಜ್ ಪೆರಿಯತ್ತೋಡಿ, ಜಯಶ್ರೀ ಎಸ್ ಶೆಟ್ಟಿ, ನಿತೀಶ್ ಕುಮಾರ್ ಶಾಂತಿವನ, ಪುರುಷೋತ್ತಮ ಮುಂಗ್ಲಿಮನೆ ಸಹಿತ ಬಿಜೆಪಿ ವಾರ್ಡ್ ಪ್ರಮುಖರು ಸಹಿತ ಹಲವಾರು ಮಂದಿ ಜೊತೆಗಿದ್ದರು.