





ಪುತ್ತೂರು: ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲೆಯ ವಾರ್ಷಿಕೋತ್ಸವು ಡಿ.14ರಂದು ಮಾಯ್ ದೆ ದೇವುಸ್ ಇಗರ್ಜಿಯ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷರಾದ ಹಾಗೂ ಸಂಚಾಲಕರಾದ ಅ|ವಂ|ಲಾರೆನ್ಸ್ ಮಸ್ಕರೇನ್ಹಸ್, ಹಿರಿಯ ವಿದ್ಯಾರ್ಥಿನಿ ಹಾಗೂ ಮುಖ್ಯ ಅತಿಥಿಯಾದ ಡಾ| ತಾರಾ ನಂದನ್, ಮಾಯಿ ದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಜೆರಾಲ್ಡ್ ಡಿಕೋಸ್ಟ, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷೆ ಉದಯಕುಮಾರಿ, ಶಾಲಾ ಮುಖ್ಯೋಪಾಧ್ಯಾಯಿನಿ ರೋಸಲಿನ್ ಪ್ಲೇವಿ ಲೋಬೊ, ಶಾಲಾ ನಾಯಕಿ ಫಾತಿಮ ಖಾಸಿಂ ವೇದಿಕೆಯಲ್ಲಿ ಉಪಸ್ಥಿರಿದ್ದರು.



ಹಿರಿಯ ವಿದ್ಯಾರ್ಥಿ ತಾರಾ ನಂದನ್ ರವರು ಮಾತನಾಡಿ, ನಾನು ಹಿರಿಯ ವಿದ್ಯಾರ್ಥಿಯಾಗಿದ್ದು ಈ ಶಾಲೆಯು ನನ್ನ ಸರ್ವತೋಮುಖ ಏಳಿಗೆಗೆ ಕಾರಣವಾಗಿದೆ. ಶಾಲೆಯ ಎಲ್ಲ ಶಿಕ್ಷಕರು ನೀಡಿದ ಉತ್ತಮ ಮಾರ್ಗದರ್ಶನದಿಂದ ನಾನು ಈ ರೀತಿ ಬೆಳೆಯಲು ಸಾಧ್ಯವಾಯಿತು. ಕಿರಣ್ ಬೇಡಿ , ಕಲ್ಪನಾ ಚಾವ್ಲಾ ಹಾಗೂ ಅನೇಕ ಮಹಿಳೆಯರು ದೇಶ ವಿದೇಶಗಳಲ್ಲಿ ತಮ್ಮ ಕಾರ್ಯದಿಂದ ಹೆಸರುವಾಸಿಯಾಗಿದ್ದಾರೆ. ಆದ್ದರಿಂದ ವಿದ್ಯಾರ್ಥಿನಿಯರಾದ ನೀವು ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಶುಭ ಹಾರೈಸಿದರು.
ಶಾಲಾ ಸಂಚಾಲಕರಾದ ಅತೀ ವಂದನೀಯ ಲಾರೆನ್ಸ್ ಮಸ್ಕರೇನ್ಹಸ್ ಅವರು ಅಧ್ಯಕ್ಷೀಯ ಭಾಷಣದಲ್ಲಿ ಶಾಲೆಯು ಗುಣಾತ್ಮಕ ಶಿಕ್ಷಣವನ್ನು ನೀಡುವಲ್ಲಿ ಸಫಲವಾಗಿದೆ. ಶಾಲೆಯು ನವೀಕರಣಗೊಂಡು ಒಳ್ಳೆಯ ಸೌಲಭ್ಯಗಳನ್ನು ಮಕ್ಕಳಿಗೆ ಒದಗಿಸುತ್ತಿದೆ. ಇಲ್ಲಿನ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಉತ್ತಮ ಶಿಕ್ಷಣವನ್ನು ನೀಡುತ್ತಿದ್ದಾರೆ. ಮಕ್ಕಳು ಕಲಿಕೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಒಳ್ಳೆಯ ಮಾರ್ಗದರ್ಶನವನ್ನು ನೀಡುತ್ತಿದ್ದಾರೆ ಎಂದು ಶ್ಲಾಘಿಸಿದರು. ಮಾತ್ರವಲ್ಲದೆ ಶಾಲಾ ನವೀಕರಣ ಕಾರ್ಯದಲ್ಲಿ ಕೈ ಜೋಡಿಸಿದ ಮೈಕಲ್ ಡಿಸೋಜ, ಹೆತ್ತವರು, ಶಿಕ್ಷಕರು, ವಿದ್ಯಾರ್ಥಿನಿಯರಿಗೆ ವಂದನೆಗಳನ್ನು ಸಲ್ಲಿಸಿದರು.
ಮುಖ್ಯ ಶಿಕ್ಷಕಿ ರೋಸಲಿನ್ ಲೋಬೊ 2023-24ನೇ ಶೈಕ್ಷಣಿಕ ಸಾಲಿನ ವರದಿಯನ್ನು ಮಂಡಿಸಿದರು. ಶಿಕ್ಷಕಿ ಡೋರಿನ್ ವಿಲ್ಮಾ ಲೋಬೊರವರು ಸ್ವಾಗತಿಸಿ, ಶಾಲಾ ನಾಯಕಿ ಕು| ಫಾತಿಮಾ ಖಾಸಿಂ ವಂದಿಸಿದರು. ಸಭಾ ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಡೀನಾ ಲೋಬೊ, ಫಾತಿಮತ್ ಶಿಫಾ, ಫಾತಿಮತ್ ಮರಿಯಂ ಸಿಫಾನ ನಿರೂಪಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ನಿಶ್ಮಾ ರೈ, ಹಲಿಮಾ ಶೈಮಾ, ಶಿಝಾ ನಾಝ್ ನಿರೂಪಿಸಿದರು.












