ನಾಳೆ(ದ.16) ಬಲ್ನಾಡು ವಸತಿ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪುನಶ್ಚೇತನ ಕಾರ್ಯಾಗಾರ – ಸುಗಮ ಸಂಗೀತ ಕಾರ್ಯಕ್ರಮ

0

ಪುತ್ತೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ ಬಲ್ನಾಡು ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪುನಶ್ಚೇತನ ಕಾರ್ಯಾಗಾರ ಮತ್ತು ಸುಗಮ ಸಂಗೀತ ಕಾರ್ಯಕ್ರಮ ದ.16ರಂದು ಸಂಜೆ ಬಲ್ನಾಡು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆಯಲಿದೆ. ಪುತ್ತೂರು ಸುದಾನ ಶಿಕ್ಷಣ ಸಂಸ್ಥೆಗಳ ಸಂಚಾಲಕ ರೆ.ವಿಜಯ ಹಾರ್ವೀನ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಅರುಣ್ ನಾಯ್ಕ್ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿ.ಎಂ.ಮೋಹನ್ ಕುಮಾರ್, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪೋಷಕರ ಸಮಿತಿ ಅಧ್ಯಕ್ಷ ಗುರುಶಾಂತ್, ಪತ್ರಕರ್ತ ಸಿಶೇ ಕಜೆಮಾರ್, ಗಾಯಕಿ ಕೃಷ್ಣರಾಜ್ ಸುಳ್ಯ ಭಾಗವಹಿಸಲಿದ್ದಾರೆ. ವಿವೇಕಾನಂದ ಕಾಲೇಜಿನ ವಾಣಿಜ್ಯ ಸ್ನಾತಕೋತ್ತರ ಅಧ್ಯಯನ ವಿಭಾಗದ ಮುಖ್ಯಸ್ಥೆ ಡಾ.ವಿಜಯ ಸರಸ್ವತಿ ವಿದ್ಯಾರ್ಥಿಗಳಿಗೆ ಪ್ರೇರಣೆಯ ಮಾತುಗಳನ್ನಾಡಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಸ್ವರ ಮಾಧುರ್ಯ ಸಂಗೀತ ಬಳಗ ಪುತ್ತೂರು ಇದರ ಸಾರಥಿ ಜನಾರ್ದನ ಬಿ. ಮತ್ತು ಬಳಗದವರಿಂದ ಸುಗಮ ಸಂಗೀತ ಕಾರ್ಯಕ್ರಮ ಜರಗಲಿದೆ ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here